
ಜು.12 ರಂದು ಲೋಕ್ ಅದಾಲತ್
Wednesday, July 2, 2025
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಅಥವಾ ದೂರವಾಣಿ ಸಂಖ್ಯೆ: 0824-2448111 ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.