ಕೆಂಪು ಕಲ್ಲು, ಮರಳು ಅಭಾವ: ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಜು.14 ರಂದು ದ.ಕ. ಜಿಲ್ಲೆಯಲ್ಲಿ ಪ್ರತಿಭಟನೆ

ಕೆಂಪು ಕಲ್ಲು, ಮರಳು ಅಭಾವ: ರಾಜ್ಯ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಜು.14 ರಂದು ದ.ಕ. ಜಿಲ್ಲೆಯಲ್ಲಿ ಪ್ರತಿಭಟನೆ

ಮಂಗಳೂರು: ರಾಜ್ಯ ಸರ್ಕಾರದ ಅವಿವೇಕಿ ನಡವಳಿಕೆಗಳಿಂದಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಮರಳು ಅಲಭ್ಯವಾಗಿದ್ದು, ಪರಿಣಾಮವಾಗಿ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕರು ಹಾಗೂ ಮಾಲಕರು, ಸ್ವಂತ ಸೂರು ಕಟ್ಟಿಕೊಳ್ಳಲು ಹೊರಟಿರುವ ಬಡ ಜನರು ತೀರ ಸಂಕಷ್ಟಕ್ಕೊಳಗಾಗಿದ್ದು, ಮಳೆಗಾಲದ ಈ ದಿನಗಳಲ್ಲಿ ಜನರು ಬೀದಿಗೆ ಬೀಳುವಂತಾಗಿದೆ. ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದರೂ ಸರಿಯಾದ ಮರಳು ನೀತಿ ರೂಪಿಸದೆ, ಕೆಂಪು ಕಲ್ಲು ಗಣಿಗಾರಿಕೆಗೆ ಸೂಕ್ತ ನಿಯಮಗಳನ್ನು ರೂಪಿಸದೆ ಇದೀಗ ಅಕ್ರಮದ ಹೆಸರಿನಲ್ಲಿ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸಿರುವುದು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಾಗಿದೆ.

ಜಿಲ್ಲೆಯಲ್ಲಿ ಏಕಾಏಕಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಿರುವ ಕಾರಣದಿಂದಾಗಿ ಮರಳಿನ ಬೆಲೆ ಗಗನಕ್ಕೇರಿದೆ ಕೆಂಪು ಕಲ್ಲಿನ ಬೆಲೆ ದ್ವಿಗುಣಗೊಂಡಿದೆ. ಬಡ ಜನರು ತಮ್ಮ ಕಟ್ಟಡ ನಿರ್ಮಾಣದ ಕೆಲಸವನ್ನು ಪೂರ್ಣಗೊಳಿಸಲಾಗದೆ ಬವಣೆ ಪಡುವಂತಾಗಿದೆ. ಗಣಿಗಾರಿಕೆಯನ್ನೇ ಅವಲಂಬಿಸಿರುವ ಲಾರಿಗಳ ಚಾಲಕರು ಉದ್ಯೋಗ ರಹಿತರಾಗಿದ್ದರೆ, ಮಾಲಕರು ವಾಹನಗಳ ಸಾಲದ ಕಂತು ಕಟ್ಟಲಾಗದೇ ಒದ್ದಾಡುವಂತಾಗಿದೆ. ಕಟ್ಟಡ ನಿರ್ಮಾಣ ಕಾರ್ಯವನ್ನೇ ಅವಲಂಬಿಸಿರುವ ಸಾವಿರಾರು ಜನ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಅಲೆದಾಡುವಂತೆ ಆಗಿದೆ. ಜಿಲ್ಲೆಯ ಜನತೆ ಸಮಸ್ಯೆಯಿಂದ ಬಳಲುತ್ತಿದ್ದರೆ ಉಸ್ತುವಾರಿ ಸಚಿವರು ಎನಿಸಿಕೊಂಡವರು ಈ ಕುರಿತು ಕಿಂಚಿತ್ತು ತಲೆಕೆಡಿಸಿಕೊಂಡಿಲ್ಲದಿರುವುದು ನಮ್ಮ ಜಿಲ್ಲೆಯ ರ್ದುದೈವವಾಗಿದೆ.

ಭಾರತೀಯ ಜನತಾ ಪಾರ್ಟಿಯು ಜನರ ಈ ಸಮಸ್ಯೆಯ ಕುರಿತು ಹಲವು ವೇದಿಕೆಗಳಲ್ಲಿ ಧನಿಯೆತ್ತಿದ್ದರೂ ಸರಕಾರದ ಕಿವಿಗೆ ಕೇಳಿಸುತ್ತಿಲ್ಲ. ಹಾಗಾಗಿ ಜಿಲ್ಲೆಯ ಜನ ಬೀದಿಗೆಳಿಯುವುದು ಅನಿವಾರ್ಯವಾಗಿದ್ದು ಜುಲೈ 14ರಂದು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಎಲ್ಲಾ ಲಾರಿ ಚಾಲಕ-ಮಾಲಕರು, ಎಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರು, ಕಾರ್ಮಿಕ ಸಂಘಟನೆಗಳವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article