
ಜು.19ರಂದು ಜ್ಞಾನ ಪ್ರಸರಣ ಮಾಲಿಕೆ ಕಾರ್ಯಕ್ರಮ
Thursday, July 17, 2025
ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷದ್ನ ಮಂಗಳೂರು ತಾಲೂಕು ಸಮಿತಿ ವತಿಯಿಂದ ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಸಹಯೋಗದಲ್ಲಿ ಸಂಸ್ಕಾರ, ಸಂಸ್ಕೃತಿ ಜ್ಞಾನ ಪ್ರಸರಣ ಮಾಲಿಕೆ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಮತ್ತು ಪುಸ್ತಕಗಳ ಕೊಡುಗೆ ಕಾರ್ಯಕ್ರಮ ಜು.19 ರಂದು ಬೆಳಗ್ಗೆ 10ಕ್ಕೆ ನಗರದ ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಅಧ್ಯಕ್ಷ ಹರೀಶ್ ಅಡ್ಯಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಕ್ಲಬ್ನ ಸಮಾಜ ಸೇವಾ ಸಂಘಟಕ ನಿಖಿಲ್ ಸುವರ್ಣ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ ಡಿಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.