
ಜು.27 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
Tuesday, July 22, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಜಿಲ್ಲೆಯಲ್ಲಿ ಜು.27 ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಸಮುದ್ರ, ನದಿ ತೀರದ ಮತ್ತು ತಗ್ಗುಪ್ರದೇಶದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಹಗಲಿನಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.