
ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Tuesday, July 1, 2025
ಮಂಗಳೂರು: 2011ರಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಟ್ವಾಳದ ಬಿಮೂಡದ ನಿವಾಸಿ ಅಸಾಮಿ ಅಕ್ಬರ್ ಸಿದ್ದಿಕ್ ಎಂಬಾತ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ಜೂ.30 ರಂದು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.