
MUCSTA ದ ನೂತನ ಪದಾಧಿಕಾರಿಗಳ ಆಯ್ಕೆ: ಪ್ರೊ. ಜ್ಯೋತಿ ಶಂಕರ್ ಅಧ್ಯಕ್ಷರಾಗಿ ಆಯ್ಕೆ
Wednesday, July 23, 2025
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರ ಸಂಘದ (MUCSTA) ನೂತನ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸದಸ್ಯರ ಆಯ್ಕೆ ಪ್ರಕ್ರಿಯೆಯು ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜು.17 ರಂದು ನಡೆಯಿತು.
ನೂತನ ಅಧ್ಯಕ್ಷರಾಗಿ ಮುಲ್ಕಿ ವಿಜಯ ಕಾಲೇಜಿನ ಪ್ರೊ. ಜ್ಯೋತಿ ಶಂಕರ್, ಉಪಾಧ್ಯಕ್ಷರಾಗಿ ಮಂಗಳೂರಿನ ಎಸ್.ಡಿ.ಎಂ. ಕಾಲೇಜಿನ ಪ್ರೊ. ಶಶಿಕಲಾ ಶೆಟ್ಟಿ, ಕಾರ್ಯದರ್ಶಿಯಾಗಿ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಸುಪರ್ಣಾ ರೈ, ಜೊತೆ ಕಾರ್ಯದರ್ಶಿಯಾಗಿ ಸುರತ್ಕಲ್ ನ ಗೋವಿಂದದಾಸ ಕಾಲೇಜಿನ ಪ್ರೊ. ಶೈಲಜಾ, ಕೋಶಾಧಿಕಾರಿಯಾಗಿ ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜಿನ ಪ್ರೊ. ವಿಶ್ವ ಗಣಪತಿ ಸರ್ವಾನುಮತದಿಂದ ಆಯ್ಕೆಯಾದರು.
ಕಾರ್ಯಕ್ರಮದ ವೇಳೆ ನಿರ್ಗಮಿತ ಪದಾಧಿಕಾರಿಗಳಾದ ಪುತ್ತೂರು ವಿವೇಕಾನಂದ ಕಾಲೇಜಿನ ಪ್ರೊ. ಪ್ರಕಾಶ್ ಕುಮಾರ್, ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಡಾ. ವಿನಯಚಂದ್ರ ಹಾಗೂ ಮುಲ್ಕಿ ವಿಜಯ ಕಾಲೇಜಿನ ಪ್ರೊ. ನಾಗರಾಜ ರಾವ್ ಅವರು ನೂತನ ಪದಾಧಿಕಾರಿಗಳನ್ನು ಮತ್ತು ಕಾರ್ಯಕಾರಿ ಸದಸ್ಯರನ್ನು ಅಭಿನಂದಿಸಿದರು.
ಕಾರ್ಯಕ್ರಮವನ್ನು ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನ ಪ್ರೊ. ವಿಜಯಲಕ್ಷ್ಮೀ ನಿರೂಪಿಸಿದರು.