ರೆಡ್‌ಕ್ರಾಸ್ ಮಾನವೀಯ ಸೇವೆಯ ಪ್ರತೀಕ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್

ರೆಡ್‌ಕ್ರಾಸ್ ಮಾನವೀಯ ಸೇವೆಯ ಪ್ರತೀಕ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್


ಮಂಗಳೂರು: ರೆಡ್‌ಕ್ರಾಸ್ ಮಾನವೀಯ ಸೇವೆಯ ಪ್ರತೀಕವಾಗಿದೆ. ಕೋವಿಡ್ ಕಾಲದಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿತ್ತು. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್‌ಕ್ರಾಸ್‌ನ ಕರ್ನಾಟದ ಘಟಕವು ತನ್ನ ಸೇವಾ ಕಾರ್ಯಗಳಿಗಾಗಿ ರಾಷ್ಟ್ರ ಮಟ್ಟದಲ್ಲಿ ಎರಡು ಬಾರಿ ಪ್ರಶಸ್ತಿ ಜಯಿಸಿತ್ತು ಎಂದು ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು.

ಅವರು ಇಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ’ವನ್ನು ಉದ್ಘಾಟಿಸಿ ಮಾತನಾಡಿದರು.

ರೆಡ್‌ಕ್ರಾಸ್ ಸರ್ವಜನರ ಹಿತ ಮತ್ತು ಸರ್ವಜನರ ಸುಖ ಎಂಬ ಸಂದೇಶದಿಂದ ಕಾರ್ಯ ನಿರ್ವಹಿಸುತ್ತಿದ್ದು, ರೆಡ್‌ಕ್ರಾಸ್ ಡಿಜಿಟಲ್ ಮೂಲಕ ತನ್ನ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಸಲಹೆ ನೀಡಿದರು.

ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ರೆಡ್‌ಕ್ರಾಸ್ ವಿದ್ಯಾರ್ಥಿ ಸಮುದಾಯದಲ್ಲಿ ಮಾನವೀಯ ಮೌಲ್ಯಗಳನ್ನು ಮೂಡಿಸುವ ಸಂಘಟನೆಯಾಗಿದೆ. ರೆಡ್‌ಕ್ರಾಸ್ ಸಂಸ್ಥೆ ಸಮಾಜದಲ್ಲಿ ತನ್ನದೇ ಆದ ಸೇವೆಯಲ್ಲಿ ಗುರುತಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುತ್ತಿದೆ. ಕೆಡ್‌ಕ್ರಾಸ್ ಯುವಜನತೆಯಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಇತ್ತೀಚಿನ ದಿನದಲ್ಲಿ ರಕ್ತದಾನ ಅತ್ಯಂತ ದೊಡ್ಡ ದಾನವಾಗಿದೆ. ಈಗ ಸರ್ಕಾರ 10 ಕೆ.ಜಿ. ಉಚಿತ ಅಕ್ಕಿ ನೀಡುತ್ತಿರುವುದರಿಂದ ಅನ್ನ ದಾನ ದೊಡ್ಡದಾಗುವುದಿಲ್ಲ. ಗೂಗಲ್, ಯು-ಟೂಬ್‌ನಿಂದಾಗಿ ಶಿಕ್ಷಣ ಸುಲಭವಾಗಿದೆ. ಆದರೆ ರಕ್ತ ಬೇಕಾದರೆ ನಾವು ಇನ್ನೊಬ್ಬ ವ್ಯಕ್ತಿಯನ್ನೇ ಅವಲಂಭಿಸಬೇಕು. ಅದಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲಿಯ ತನಕ ಸಿಕ್ಕಿಲ್ಲ ಎಂದು ಹೇಳಿದರು.

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ದ.ಕ. ಜಿಲ್ಲೆಯಲ್ಲಿ ಕಳೆದ 70 ದಶಕಗಳಿಂದ ರೆಡ್‌ಕ್ರಾಸ್ ಕಾರ್ಯ ನಿರ್ವಹಿಸುತ್ತಿದೆ. ಆದರೆ ಕೋವಿಡ್ ಸಂದರ್ಭದಲ್ಲಿ ರೆಡ್‌ಕ್ರಾಸ್ ಬಹಳ ಸಹಾಯ ಮಾಡಿದೆ ಎಂದರು.

ರೆಡ್‌ಕ್ರಾಸ್ ಜಿಲ್ಲಾ ಘಟಕದ ಚೆಯರ್‌ಮ್ಯಾನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ವೇದವ್ಯಾಸ ಕಾಮತ್, ರೆಡ್‌ಕ್ರಾಸ್‌ನ ರಾಜ್ಯ ಘಟಕದ ಉಪಾಧ್ಯಕ್ಷ ಭಾಸ್ಕರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಅವರು ರೆಡ್‌ಕ್ರಾಸ್‌ನ ಸ್ಮರಣ ಸಂಚಿಕೆಯನ್ನು ಅನಾವರಣಗೊಳಿದರು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮತ್ತು ಶತಮಾನೋತ್ಸವ ಕಟ್ಟಡ ಸಮಿತಿ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರನ್ನು ರಾಜ್ಯಪಾಲರು ಸನ್ಮಾನಿಸಿದರು. 

ದ.ಕ. ಜಿಲ್ಲಾಧಿಕಾರಿ, ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ದರ್ಶನ್ ಎಚ್.ವಿ., ಶತಮಾನೋತ್ಸವ ಕಟ್ಟಡ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಜೈನ್, ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಸತೀಶ್ ರಾವ್, ಖಜಾಂಚಿ ಮೋಹನ್ ಶೆಟ್ಟಿ ಕೆ., ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಡಾ. ಸಚ್ಚಿದಾನಂದ ರೈ, ಡಾ. ಸುಮನಾ ಬೋಳಾರ್, ಗುರುದತ್ ಎಂ. ನಾಯಕ್, ಎ. ವಿಠಲ, ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.

ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ವಂದಿಸಿದರು. ಡಾ. ಮಂಜುಳಾ ಶೆಟ್ಟಿ ಮತ್ತು ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article