ಓಲೈಕೆ ರಾಜಕಾರಣ: ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಅವರ ಮೇಲೆ ಕೇಸು ಖಂಡನೆ

ಓಲೈಕೆ ರಾಜಕಾರಣ: ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಅವರ ಮೇಲೆ ಕೇಸು ಖಂಡನೆ

ಮಂಗಳೂರು: ಉಡುಪಿ ಜಿಲ್ಲೆಯ ಬ್ರಹ್ಮವರದಲ್ಲಿ ನಡೆದ ಗೋಹತ್ಯೆ ಪ್ರಕರಣವನ್ನು ಖಂಡಿಸಿ ಮಾಧ್ಯಮದಲ್ಲಿ ನೀಡಿದ ಹೇಳಿಕೆಯ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. 

ಹಲವು ವರ್ಷಗಳಿಂದ ಅಕ್ರಮ ಗೋಸಾಗಾಟ, ಗೋಹತ್ಯೆ ಅಲ್ಲದೆ ಗೋಕಳ್ಳತನ ನಡೆಯುತ್ತಿದ್ದು ಇದರಿಂದ ಗಲಭೆಗಳು ನಡ್ದೆದು ಜಿಲ್ಲೆ ಪ್ರಕ್ಷುಬ್ದವಾಗಿರುವ ಘಟನೆಗಳು ನಡೆದಿತ್ತು. ಈ ಗೋಮಾಫಿಯಾದ ಹಿಂದೆ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿದ್ದು, ಇದರ ಬಗ್ಗೆ ಮಾತನಾಡಿದ್ದನ್ನು ಕಾರಣವಾಗಿಟ್ಟುಕೊಂಡು ಓಲೈಕೆ ರಾಜಕೀಯಕೊಸ್ಕರ ಶರಣ್ ಪಂಪುವೆಲ್ ಅವರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ. 

ಇದರಿಂದ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಅಲ್ಲದೆ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿರ್ಬಂಧಿಸಿದ್ದಾರೆ ಇದೆಲ್ಲವೂ ಯಾರನ್ನೋ ಓಲೈಕೆ ಮಾಡಲು ಹಿಂದೂ ನಾಯಕರನ್ನು ಧಮನಿಸುವ ಕೆಲಸ ನಡೆಯುತ್ತಿದ್ದು, ಸಂವಿಧಾನಕ್ಕೆ ಆಶಯಕ್ಕೆ ವಿರೋಧವಾಗಿದ್ದು ಇದನ್ನು ಬಲವಾಗಿ ಖಂಡಿಸುತ್ತೇವೆ. ತಕ್ಷಣ ಅವರ ಮೇಲೆ ಹಾಕಿರುವ ಕೇಸನ್ನು ಮತ್ತು ನಿರ್ಬಂಧ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಮಂಗಳೂರು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article