ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ: ಡಾ. ಜಿ. ಪರಮೇಶ್ವರ್

ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ: ಡಾ. ಜಿ. ಪರಮೇಶ್ವರ್

ಮಂಗಳೂರು: ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಪೊಲೀಸರಿಗೂ ಸೂಚಿಸಲಾಗಿದೆ. ಆಂಟಿ ರ‍್ಯಾಗಿಂಗ್ ಮಾದರಿಯಲ್ಲಿ ಆಂಟಿ  ಡ್ರಗ್ಸ್ ಸಮಿತಿ ರಚಿಸುವುದು ಕಡ್ಡಾಯವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಸೌಹಾರ್ದ ಸಮಿತಿ ರಚನೆ ಬಗ್ಗೆ ಉಸ್ತುವಾರಿ ಸಚಿವರು ಸಾಧಕ, ಬಾಧಕ ಬಗ್ಗೆ ಚರ್ಚಿಸಿ ತೀರ್ಮಾನಿಸಲಿದ್ದಾರೆ. ಸರ್ವಪಕ್ಷ, ಸಮುದಾಯಗಳು, ನಾಗರಿಕರು ಸೇರಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಸೌಹಾರ್ದ ಸಮಾವೇಶ ನಡೆಸಲು ಯಾವುದೇ ಅಭ್ಯಂತರ ಇಲ್ಲ ಎಂದರು.

ಕರಾವಳಿಯಲ್ಲಿ ಶಾಂತಿಯ ವಾತಾವರಣ ಬರಬೇಕು. ಭಯದ ವಾತಾವರಣ ದೂರವಾಗಬೇಕು. ಅಹಿತಕರ ಘಟನೆ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅನಿವಾರ್ಯತೆ ಬರಲೇ ಬಾರದು. ಈಗಾಗಲೇ

ಪೊಲೀಸ್ ಅಧಿಕಾರಿಗಳು ಕೈಗೊಂಡ ಕ್ರಮದ ಬಗ್ಗೆ ಎಲ್ಲರಿಂದ ಪ್ರಶಂಸೆ ವ್ಯಕ್ತವಾಗಿದೆ. ಶಾಂತಿ ಕದಡುವ ಮೂಲಕ ಮತ್ತಷ್ಟು ಕಠಿಣ ಕ್ರಮಕ್ಕೆ ಅವಕಾಶ ನೀಡಬಾರದು. ಈ ಹಿಂದಿನಂತೆ ಕರಾವಳಿಯಲ್ಲಿ ಸೌಹಾರ್ದತೆ ಮರಳಬೇಕು ಎಂದು ಸಚಿವರು ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article