ಸಾರ್ವಜನಿಕ ಕಾರ್ಯಕ್ರಮ; ಷರತ್ತು ಪಾಲಿಸಲು ಸೂಚನೆ

ಸಾರ್ವಜನಿಕ ಕಾರ್ಯಕ್ರಮ; ಷರತ್ತು ಪಾಲಿಸಲು ಸೂಚನೆ


ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್ ಪ್ರಮುಖವಾದವುಗಳಾಗಿವೆ.

ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು (ರಸ್ತೆ, ಸಮಯ, ಧ್ವನಿ ನಿಯಂತ್ರಣ) ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಈ ವಿವರ ನೀಡದಿರುವ ಆಯೋಜಕರಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗುವುದಿಲ್ಲ. ಯಾವುದೇ ಷರತ್ತುಗಳ ಉಲ್ಲಂಘನೆಯಾದಲ್ಲಿ ಘಟನೆಯ ಹೊಣೆಗಾರಿಕೆ ಈ ನಿಯೋಜಿತ ವ್ಯಕ್ತಿಗಳ ಮೇಲೆ ಇರಲಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಕಡ್ಡಾಯ ಪೊಲೀಸ್ ಅನುಮತಿ ಮತ್ತು ಸಮಯದ ನಿರ್ಬಂಧ ಪಾಲನೆ., ಡಿಜೆ ಸಂಪೂರ್ಣ ನಿಷೇಧ, ಧ್ವನಿವರ್ಧಕಗಳಿಗೆ ಅನುಮತಿ ಅಗತ್ಯ, 24x7 ಭದ್ರತೆ ಮತ್ತು ಸಿಸಿಟಿವಿ ಕಡ್ಡಾಯಧಾರ್ಮಿಕ ವಿರೋಧಿ ಘೋಷಣೆಗಳು ಮತ್ತು ದ್ವೇಷ ಭಾಷಣ ದ್ವೇಷ ನಿಷೇಧ (ಮುದ್ರಣ & ಸಾಮಾಜಿಕ ಮಾಧ್ಯಮದಲ್ಲಿ). ಜನಸಂದಣಿಗೆ ನಿಯಂತ್ರಣಕ್ಕೆ ಸಮರ್ಪಕ ಸ್ವಯಂಸೇವಕರ ನೇಮಕಾತಿ ಕಡ್ಡಾಯ. ಪೆಂಡಾಲ್ ಎತ್ತರ ನಿಯಮಗಳು ಮತ್ತು ವಾಹನ ಸುರಕ್ಷಾ ನಿಯಮ ಪಾಲನೆಅಗ್ನಿಶಾಮಕ ಮತ್ತು ತುರ್ತು ವ್ಯವಸ್ಥೆಗಳ ಒದಗಿಸುವಿಕೆ:, ವಾಹನ ಸಂಚಾರ ಮುಕ್ತವಾಗಿ ನಿರ್ವಹಣೆ ಮತ್ತು ತುರ್ತು ಮಾರ್ಗಗಳ ನಿರ್ಬಂಧ. ಸಾರ್ವಜನಿಕ/ಖಾಸಗಿ ಆಸ್ತಿಗೆ ಹಾನಿ ಮಾಡಬಾರದು, ಸಮಯ, ಕಾರ್ಯಕ್ರಮ ವಿವರ ಮತ್ತು ಪೊಲೀಸ್ ಸೂಚನೆ ಪಾಲನೆ ಮಹಿಳೆಯರ ಸುರಕ್ಷತೆಗೆ ಶೂನ್ಯ ಸಂಹಿತೆ ನೀತಿ, ಸ್ವಚ್ಛತೆ, ಫ್ಲೆಕ್ಸ್ ಮತ್ತು ಬ್ಯಾನರ್ ನಿಯಂತ್ರಣ, ಶಸ್ತ್ರಾಸ್ತ್ರಗಳು ಮತ್ತು ಅಪಾಯಕಾರಿ ವಸ್ತುಗಳ ನಿಷೇಧ, ಡ್ರೋನ್ ಬಳಸಲು ಮುಂಚಿತ ಅನುಮತಿ ಕಡ್ಡಾಯ, ಮೆರವಣಿಗೆಯಲ್ಲಿ ಪ್ರಾಣಿಗಳ ಬಳಕೆಗೆ ನಿಯಂತ್ರಣ, ಪೊಲೀಸ್ ತಪಾಸಣೆಗೆ ಅಡ್ಡಿ ಮಾಡುವುದು ನಿಷಿದ್ಧ, ಅನುಮಾನಾಸ್ಪದ ಚಟುವಟಿಕೆಗಳ ವರದಿ ನೀಡುವುದು ಕಡ್ಡಾಯ, ಉಲ್ಲಂಘನೆ: BNS 2023 ರ ಕಲಂ 217 ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article