
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಆರೆಂಜ್ ಅಲರ್ಟ್ ಘೋಷಣೆ
Friday, July 4, 2025
ಮಂಗಳೂರು: ಕರಾವಳಿಯಲ್ಲಿ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಸಾರಲಾಗಿತ್ತು. ದ.ಕ. ಜಿಲ್ಲೆಯಲ್ಲಿ
ದಿನವಿಡೀ ಹಗುರದಿಂದ ಸಾಧಾರಣ ಮಳೆ ಮುಂದುವರಿದಿದೆ. ಜು.5 ರಿಂದ 7 ರ ವರೆಗೆ ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ದ.ಕ. ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದೀಚೆಗೆ ಬೆಳಗ್ಗಿನ ವರೆಗೆ ಹಗುರದಲ್ಲಿ ಮಳೆ ಸುರಿದಿದೆ. ಬೆಳಗ್ಗೆಯೂ ಮಳೆ ಮುಂದುವರಿದಿದ್ದು, ಅಪರಾಹ್ನ ಮಳೆ ಕಡಿಮೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಂಜೆ ಮತ್ತೆ ಮಳೆ ಕಾಣಿಸಿದೆ.