
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮಾ
Thursday, July 10, 2025
ಮಂಗಳೂರ: ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆಯ ಆಚರಣೆಯು ಇಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಹೊಸದಿಗಂತ ಪತ್ರಿಕೆಯ ಸಿಇಓ ಪಿ ಎಸ್ ಪ್ರಕಾಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಮಕ್ಕಳು ಗುರುವಿನ ಮೇಲೆ ತಮ್ಮಗೌರವವನ್ನು ಸೂಚಿಸುವ ಮಾತುಗಳನ್ನು ಆಡಿದರು. ಬಳಿಕ ಶಕ್ತಿ ಶಾಲೆಯ ಸಂಸ್ಕೃತ ಶಿಕ್ಷಕಿ ಸಾರಿಕಾ ಗುರುಪೂರ್ಣಿಮೆಯ ಮಹತ್ವದ ಬಗ್ಗೆ ತಿಳಿಸಿದರು. ಪಿ ಎಸ್ ಪ್ರಕಾಶ್‌ಅವರಿಗೆ ಪಾದಪೂಜೆಯನ್ನು ಮಾಡುವ ಮೂಲಕ ಗುರುಪೂಜೆಯನ್ನು ನೆರವೇರಿಸಲಾಯಿತು. ನಂತರ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಗುರುಗಳ ಆಶೀರ್ವಾದವನ್ನು ಪಡೆದರು.
ಅಧ್ಯಕ್ಷತೆ ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಂ ಡಾ. ಕೆ ಸಿ ನಾಕ್‌ಅವರು ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಮಾಡಿದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಕೆ,ಉಪ ಪ್ರಾಂಶುಪಾಲ ನಟೇಶ್ ಆಳ್ವ ಉಪಸ್ಥಿತರಿದ್ದರು. ಶಕ್ತಿ ಶಾಲೆಯ ಶಿಕ್ಷಕ ಶರಣಪ್ಪ ಕಾರ್ಯಕ್ರಮ ನಿರೂಪಿಸಿದರು.