ಬಹುಕೋಟಿ ವಂಚನೆ ಪ್ರಕರಣ: ತನಿಖಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬಹುಕೋಟಿ ವಂಚನೆ ಪ್ರಕರಣ: ತನಿಖಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಮಂಗಳೂರು: ಸಾಲಕೊಡುವ ನೆಪದಲ್ಲಿ ಬಹುಕೋಟಿ  ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ದಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದೂವರೆ ಕೋಟಿ ವಂಚನೆ ಪ್ರಕರಣದಲ್ಲಿ ಹೈ ಕೋರ್ಟ್ ಪೊಲೀಸರ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ದಾನ ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದರು. ಇಡೀ ದೇಶದಲ್ಲೇ ಈತನ ಬಂದನ ಸುದ್ದಿಯಾಗುತ್ತಿದ್ದಂತೆ ಇತನಿಂದ ಮೋಸಗೊಳಗಾದ ಹಲವು ಉದ್ಯಮಿಗಳು ಪೊಲೀಸ್ ಠಾಣೆಗೆ ಕರೆ ಮಾಡಿ ತಮಗೆ ಆದ ಮೋಸದ ಬಗ್ಗೆ ದೂರು ದಾಖಲಿಸಿದ್ದಾರು. ಅದರಲ್ಲಿ ಬಿಹಾರ ಮೂಲದ ಉದ್ಯಮಿ ತನ್ನಿಂದ ಹತ್ತು ಕೋಟಿ ರು. ವಂಚನೆ ಎಸಗಿದ್ದಾನೆಂದು ದೂರು ನೀಡಿದ್ದರು. ಅಸ್ಸಾಂ ಮತ್ತು ಮಹಾರಾಷ್ಟ್ರ ಮೂಲದ ವ್ಯಕ್ತಿಗಳೂ ಕೋಟಿ ರು.ನಂತೆ ವಂಚನೆ ಎಸಗಿದ್ದಾಗಿ ದೂರು ನೀಡಿದ್ದರು. ಅದಕ್ಕೂ ಮೊದಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಒಂದೂವರೆ ಕೋಟಿ ರು. ವಂಚಿಸಿದ್ದ ಬಗ್ಗೆ ದೂರು ನೀಡಿದ್ದರು. ಮಂಗಳೂರಿನಲ್ಲಿ ದಾಖಲಾದ ಎರಡು ದೂರನ್ನು ಆಧರಿಸಿ ಪೊಲೀಸರು ಆರೋಪಿ ರೋಶನ್ ಸಲ್ದಾನ ವಿರುದ್ಧ ಕಾರ್ಯಾಚರಣೆ ನಡೆಸಿ ಆತನ ಮನೆಯಲ್ಲೇ ಬಂಧಿಸಿದ್ದರು. 

ಬಂಧನ ಸಂದರ್ಭದಲ್ಲಿ ತನ್ನ ಮನೆಯನ್ನು ಐಷಾರಾಮಿಯಾಗಿ ತೋರಿಸುತ್ತಿದ್ದುದು. ಮನೆಯ ಒಳಗಡೆಯೇ ವಿದೇಶಿ ಮದ್ಯವನ್ನೊಳಗೊಂಡ ಬಾರ್ ಅಂಡ್ ರೆಸ್ಟೋರೆಂಟ್ ರೀತಿ ಮಾಡಿರುವುದು ಪತ್ತೆಯಾಗಿತ್ತು. ಅಲ್ಲದೆ ಮಲೇಶ್ಯನ್ ಯುವತಿಯನ್ನೂ ಜೊತೆಗೆ ಇಟ್ಟುಕೊಂಡಿರುವುದು ಕಂಡುಬಂದಿತ್ತು. ನಂತರ ಮಂಗಳೂರಿನ ಸಿಜೆಎಂ ಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದರೂ, ಬೆನ್ನು ಬೆನ್ನಿಗೆ ದೂರು ದಾಖಲಾಗಿದ್ದರಿಂದ ಜಾಮೀನು ಸಿಕ್ಕಿರಲಿಲ್ಲ. 

ಈ ನಡುವೆ ಹೈಕೋರ್ಟ್ ಮೂಲಕ ಎರಡು ಪ್ರಕರಣಗಳಿಗೆ ತಡೆಯಾಜ್ಞೆ ತರಲಾಗಿದೆ. ಮಂಗಳೂರಿನಲ್ಲಿ ರೋಶನ್ ಸಲ್ದಾನ ಪರವಾಗಿ ಹಿರಿಯ ಕ್ರಿಮಿನಲ್ ವಕೀಲ ಅರುಣ್ ಬಂಗೇರ ವಕಾಲತ್ತು ನಡೆಸುತ್ತಿದ್ದಾರೆ. ಸದ್ಯಕ್ಕೆ ಆರೋಪಿ ರೋಶನ್ ಸಲ್ವಾನ ಪೊಲೀಸರ ಕಸ್ಟಡಿಯಲ್ಲಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article