
ಜಗತ್ತು ಅತ್ಯಂತ ವೇಗವಾಗಿ ಓಡುತ್ತಿದೆ. ಯುವ ಜನಾಂಗ ಆ ವೇಗಕ್ಕೆ ತಕ್ಕಂತೆ ಬದುಕು ರೂಪಿಸಿಕೊಳ್ಳಬೇಕು: ಶಾಸಕ ಕಾಮತ್
Thursday, July 24, 2025
ಮಂಗಳೂರು: ಜಗತ್ತು ಅತ್ಯಂತ ವೇಗವಾಗಿ ಓಡುತ್ತಿದೆ. ಯುವ ಜನಾಂಗ ಆ ವೇಗಕ್ಕೆ ತಕ್ಕಂತೆ ಬದುಕು ರೂಪಿಸಿಕೊಳ್ಳಬೇಕು. ನೀವು ಒಂದು ಉದ್ಯೋಗ ಪಡೆದು ಆರ್ಥಿಕವಾಗಿ ಸದೃಢರಾದರೆ ಮೊದಲು ಖುಷಿ ಪಡುವುದು ನಿಮ್ಮ ಹೆತ್ತವರು. ಆ ಕಾರಣಕ್ಕಾಗಿ ಆಳ್ವಾಸ್ ಕಾಲೇಜಿನ ಕ್ಯಾಂಪಸ್ ನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಲಿರುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿಯಾಗಿ ಉದ್ಯೋಗ ಮಾಹಿತಿ ಶಿಬಿರದ ನೇತೃತ್ವವನ್ನು ವಹಿಸಿ ಮಾತನಾಡಿದರು.
ನಿಮ್ಮ ಅನುಕೂಲಕ್ಕಾಗಿ ಮಂಗಳೂರಿನಿಂದ ಬಸ್ ವ್ಯವಸ್ಥೆಯೂ ಸಹ ಇರಲಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಇಂದಿನ ಕಾರ್ಯಾಗಾರದಲ್ಲಿ ಭಾಗವಹಿಸಿರುವ ಉದ್ಯೋಗಾಕಾಂಕ್ಷಿ ಯುವ ಮಿತ್ರರಲ್ಲಿ ಹೊಸ ಭರವಸೆ ತುಂಬಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಆತ್ಮೀಯರಾಗಿರುವ ವಿವೇಕ್ ಆಳ್ವರಿಗೆ ವಿಶೇಷ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ, ಪ್ರಾಂಶುಪಾಲ ಜಯಕರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.