ಎಸ್‌ಡಿಎಂ ಪಿಜಿ ಸೆಂಟರ್‌ನಲ್ಲಿ ‘ಹೋಲಿಸ್ಟಿಕ್ ವೆಲ್‌ನೆಸ್ ಕ್ಲಬ್’ ಉದ್ಘಾಟನೆ
Monday, July 21, 2025
ಮಂಗಳೂರು: ಎಸ್‌ಡಿಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಪೋಸ್ಟ್ ಗ್ರ್ಯಾಜುಯೇಟ್ ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಮಂಗಳೂರು ಇಲ್ಲಿ ಜು.21 ರಂದು ಕಾಲೇಜು ಸಭಾಂಗಣದಲ್ಲಿ ಹೋಲಿಸ್ಟಿಕ್ ವೆಲ್‌ನೆಸ್ ಕ್ಲಬ್‌ನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಕ್ಕಳ ಮತ್ತು ಹದಿಹರೆಯದ ಮನೋವೈದ್ಯ ಡಾ. ಅವಿನಾಶ್ ಕಾಮತ್ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಮಾನಸಿಕ ಆರೋಗ್ಯ ಸವಾಲುಗಳನ್ನು ಪರಿಹರಿಸುವ ಮೂಲಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪೂರ್ವಭಾವಿ ತಂತ್ರಗಳ ಮಹತ್ವವನ್ನು ತಿಳಿಸಿದರು.
ಮುಖ್ಯ ಅತಿಥಿಯಾಗಿ ಸ್ಕಿಲ್‌ಸೆಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕಿ ಎಂ. ಸಂಜನಾ ಕಾಮತ್ ಮಾತನಾಡಿ, ಭಾವನಾತ್ಮಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಮಹತ್ವದ ತಮ್ಮ ಅನುಭವವನ್ನು ಹಂಚಿಕೊಂಡರು.
ಸಂಸ್ಥೆಯ ನಿರ್ದೇಶಕಿ ಡಾ. ಸೀಮಾ ಎಸ್. ಶೆಣೈ ಸ್ವಾಗತಿಸಿದರು. ಅಧ್ಯಾಪಕ ಸಂಯೋಜಕಿ ಹಾಗೂ ಕಾರ್ಯಕ್ರಮ ಸಂಯೋಜಕಿ ಡಾ. ಶೈನಿ ನವೀನ್ ಕ್ಲಬ್ ಬಗ್ಗೆ ಮಾತನಾಡಿದರು. ವಾಣಿಶ್ರೀ ವಂದಿಸಿದರು. ನೇಹಾ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು.