
ಉತ್ತಮ ಶಿಕ್ಷಣದಿಂದ ನೈಜ್ಯ ಅಭಿವೃದ್ದಿ ಸಾಧ್ಯ: ಬಿಸಿಎಂ ಇಲಾಖೆಯ ವಿವಿಧ ಅಭಿವೃದ್ದಿ ಕಾಮಗಾಗೆ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ದ.ಕ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನೂರಾರು ಶಿಕ್ಷಣ ಸಂಸ್ಥೆಗಳಿದ್ದು, ದೇಶದ ಮೂಲೆ ಮೂಲೆಯಿಂದ ವಿಧ್ಯಾರ್ಥಿಗಳು ಇಲ್ಲಿಗೆ ಆಗಮಿಸಿ ಶಿಕ್ಷಣ ಪಡೆಯುತ್ತಿದ್ದಾರೆ. ಇದಕ್ಕಾಗಿಯೇ ಇಲ್ಲಿ ವಿದ್ಯಾರ್ಥಿನಿಲಯಗಳಿಗೆ ಬೇಡಿಕೆ ಜಾಸ್ತಿ. ಉತ್ತಮ ಶಿಕ್ಷಣದಿಂದ ನೈಜ್ಯ ಅಭಿವೃದ್ದಿ ಸಾಧ್ಯವಿದ್ದು, ಶಿಕ್ಷಣ ವ್ಯವಸ್ಥೆಗಾಗಿ ಸರ್ಕಾರದಿಂದ ಅನೇಕ ಜನಪರ ಯೋಜನೆಗಳು ಜಾರಿಗೊಳ್ಳುತ್ತಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶುಕ್ರವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉರ್ವಾಸ್ಟೋರ್‌ನಲ್ಲಿ ನಿರ್ಮಾಣಗೊಂಡ ಶ್ರೀ. ಡಿ.ದೇವರಾಜ ಅರಸ್ ಭವನದ ನೂತನ ಕಟ್ಟಡ ಹಾಗೂ ಶ್ರೀಮತಿ ಇಂದಿರಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯದ ಉದ್ಘಾಟನೆ, ಶ್ರೀ ದೇವರಾಜು ಅರಸು ಮೆಟ್ರಿಕ್ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಈಗಾಘಲೇ ಸುಮಾರು 5 ಕೋ.ರೂ ವೆಚ್ಚದಲ್ಲಿ ವಿದ್ಯಾರ್ಥಿನಿಲಯ ನಿರ್ಮಾಣಗೊಂಡಿದೆ. ಈಗಾಘಲೇ 2 ಹೊಸ ವಿದ್ಯಾರ್ಥಿನಿಲಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಯೋಜನೆಗಳೆಲ್ಲ ಫಲಾನುಭವಿಗಳಿಗೆ ತಲುಪಿ ಯಶಸ್ವಿಯಾಗುತ್ತಿದೆ. ಕಾಂಗ್ರೆಸ್ ಸರ್ಕಾರ ದಶಕಗಳ ಹಿಂದೆ ಶ್ರೀಶಕ್ತಿ ಯೋಜನೆ ಆರಂಬಿಸಿ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ವಲಯದಲ್ಲಿ ಹೆಚ್ಚು ಮುನ್ನೆಲೆಗೆ ಬರುವಂತೆ ಮಾಡಲಾಗಿದೆ. ರಾಜಕೀಯವಲಯದಲ್ಲೂ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡಬೇಕಾಗಿದ್ದು, ವಿದಾನಸಭೆ ಹಾಗೂ ಸಂಸಸತ್ತಿನಲ್ಲೂ ಹೆಚ್ಚಿನ ಅವಕಾಶ ಸಿಗಬೇಕಾಗಿದೆ. ಇದಕ್ಕಾಗಿ ಮಹಿಳೆಯರು ಹೆಚ್ಚು ಶಿಕ್ಷಣವಂತರಾಗಬೇಕಾಗಿದ್ದು, ಸರ್ಕಾರ ಮಹಿಳಾ ಶಿಕ್ಷಣಕ್ಕೆ ಬೇಕಾಗಿರುವ ಯೋಜನೆಗಳನ್ನು ಜಾರಿಗೊಳಿಸಲು ಬದ್ದವಾಗಿದೆ ಎಂದರು.
ಮಂಗಳೂರಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದ್ದು, ವಿದ್ಯಾರ್ಥಿ ನಿಲಯದ ಬೇಡಿಕೆ ಹೆಚ್ಚಾಗುತ್ತಿದೆ. ಮುಂದಿನ ದಿನದಲ್ಲಿ ಇಲಾಖೆಯಿಂದ ಹೆಚ್ಚಿ ವಿದ್ಯಾರ್ಥಿನಿಯಲ ಸ್ಥಾಪನೆಗೆ ಅನುದಾನ ಮೀಸಲಿಡಲಾಗುವುದು. ಇಂದು ಉದ್ಘಾಟನೆಗೊಂಡ ವಿದ್ಯಾರ್ಥಿನಿಯಗಳನ್ನು ವಿದ್ಯಾರ್ಥಿಗಳು ಯೋಗ್ಯ ರೀತಿಯಲ್ಲಿ ಬಳಸಿಕೊಂಡು ಶಿಕ್ಷಣ ಪಡೆದಾಗ ಸರ್ಕಾರದ ಯೋಜನೆಗಳು ಸಾಕಾರಗೊಳ್ಳುತ್ತದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.
ದ.ಕ ಜಿಲ್ಲಾಧಿಕಾರು ದರ್ಶನ್ ಎಚ್.ವಿ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ಖರ್ಬರಿ, ಎಂಎಲ್‌ಸಿ ಐವನ್ ಡಿಸೋಜಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ಎನ್ ನಾಯಕ್, ತಾಲೂಕು ಕಲ್ಯಾಣಾಧಿಕಾರಿ ಮಹಾಲಕ್ಷ್ಮೀ ಬೋಳಾರ್, ಗೇರು ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಸದಾನಂದ ಮಾವಜಿ ಸಹಿತ ಹಲವರಿದ್ದರು.
ಬಿಸಿಎಂ ವಿದ್ಯಾರ್ಥಿ ನಿಲಯದ ನಿಲಯ ಮೇಲ್ವಿಚಾರಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿಲಯ ಮೇಲ್ವಿಚಾರಕ ರಾಧೇಶ್ ತೊರ್ಕೆ ಕಾರ್ಯಕ್ರಮ ನಿರೂಪಿಸಿದರು.