ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನ ಬಂಧನ

ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನ ಬಂಧನ


ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ತಂದು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಕುಖ್ಯಾತ ದನಕಳ್ಳನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 12.05 ಗ್ರಾಂ. ಎಂಡಿಎಂಎನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಕಸಬಾ ಬಂಗ್ರೆಯ ನಿವಾಸಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (36) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ 1,20,000 ರೂ. ಮೌಲ್ಯದ 12.05 ಗ್ರಾಂ. ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಏಂ-25-ಒಂ-8950ನೇ ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು 4,31,250 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಗರಕ್ಕೆ ಬೆಂಗಳೂರು/ಮುಂಬೈಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ತರಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಿಳಿ ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜು.3 ರಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಎಂಬಾತನ ವಿರುದ್ಧ ಮಂಗಳೂರು ನಗರದ ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪೂರ್ವ, ಕಂಕನಾಡಿ ನಗರ, ಉಳ್ಳಾಲ, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆ, ಕೊಡಗು ಜಿಲ್ಲಾ ವ್ಯಾಪ್ತಿಯ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ 15ಕ್ಕಿಂತ ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article