ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ

ವಿದ್ಯಾರ್ಥಿಗಳು ಡ್ರಗ್ಸ್ ಜಾಲಕ್ಕೆ ಬಲಿಯಾಗಬೇಡಿ: ಅಜ್ಮತ್ ಅಲಿ


ಮಂಗಳೂರು: ಮಾದಕ ದ್ರವ್ಯ ಪೆಡ್ಲರ್‌ಗಳ ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಜಿ. ಹೇಳಿದರು. 

ಅವರು ಜು.28 ರಂದು ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ಮಾತನಾಡಿದರು.


ಕಾಲೇಜುಗಳಲ್ಲಿ ಮಾದಕದ್ರವ್ಯ ತಡೆ ಸಮಿತಿಯ ಕಾರ್ಯನಿರ್ವಹಣೆ, ಅನಾಮಿಕರಾಗಿ ಕ್ಯೂಆರ್ ಕೋಡ್ ಮೂಲಕ ಪೊಲೀಸ್ ಇಲಾಖೆಗೆ ದೂರು ಸಲ್ಲಿಸುವ ಸೌಲಭ್ಯ, ಮಾದಕದ್ರವ್ಯ ಕೇಸಿನಲ್ಲಿ ಸಿಲುಕಿಕೊಂಡರೆ ಆಗುವ ಸಮಸ್ಯೆಗಳು ಇತ್ಯಾದಿಗಳ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ವಹಿಸಿ ಮಾತನಾಡಿ, ಕಾಲೇಜಿನ ಅವರಣವನ್ನು ಮಾದಕದ್ರವ್ಯ ಮುಕ್ತಗೊಳಿಸಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಮಾದಕದ್ರವ್ಯ ತಡೆ ಸಮಿತಿಯ ಸಂಯೋಜಕ ಡಾ. ಲೋಕೇಶ್‌ನಾಥ್ ಬಿ., ಸಮಿತಿಯ ಇತರ ಸದಸ್ಯರು, ಬೋಧಕ ವರ್ಗದವರು ಉಪಸ್ಥಿತರಿದ್ದರು. 

ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಸ್ವಾಗತಿಸಿ, ಐಕ್ಯೂಎಸಿ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದುಗ್ಗಪ್ಪ ಕಜೆಕಾರ್ ವಂದಿಸಿದರು. 2025-26ನೇ ಸಾಲಿನಲ್ಲಿ ಪ್ರಥಮ ಪದವಿಗೆ ಪ್ರವೇಶ ಪಡೆದಿರುವ ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article