ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣೆ


ಮಂಗಳೂರು: ದೇಶಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪಶ್ಚಿಮ ಮಹಾಶಕ್ತಿ ಕೇಂದ್ರದ ವತಿಯಿಂದ ಹೊಯ್ಗೆ ಬಜಾರಿನ ಜ್ಞಾನೋದಯ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ನಮ್ಮ ದೇಶದ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ದೇವರ ಸಮಾನರಾಗಿರುವ ಮುದ್ದು ಮಕ್ಕಳ ಶಾಲಾ ಚಟುವಟಿಕೆಗಳಿಗೆ ಅಗತ್ಯವಾಗಿರುವ ಸಾಮಗ್ರಿಗಳನ್ನು ನೀಡುತ್ತಿರುವ ಈ ಸಂದರ್ಭದಲ್ಲಿ ಅವರ ಮುಖದಲ್ಲಿ ಮಂದಹಾಸ ಕಾಣುವುದೇ ಒಂದು ಸಂಭ್ರಮ. ಸಣ್ಣಪುಟ್ಟ ವಿಷಯಗಳಲ್ಲೂ ಖುಷಿಯನ್ನು ಕಾಣುವ ಗುಣವನ್ನು ನಾವು ಮಕ್ಕಳಿಂದ ಕಲಿಯಬೇಕು ಎಂದು ಹೇಳಿ, ಎಲ್ಲರಿಗೂ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್,  ಪೂರ್ಣಿಮಾ, ಮೋಹನ್ ಪೂಜಾರಿ, ಪ್ರವೀಣ್ ನಿಡ್ಡೇಲ್, ಅಶ್ವಿತ್ ಕೊಟ್ಟಾರಿ,  ಭಾನುಮತಿ, ರಘುವೀರ್ ಬಾಬುಗುಡ್ಡ, ಪೂರ್ಣಿಮಾ ರಾವ್, ವಿನೋದ್ ಮೆಂಡನ್, ನಿತಿನ್ ಕುಮಾರ್, ರೇವತಿ, ನಾರಾಯಣಗಟ್ಟಿ, ಸುಮತಿ, ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು, ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article