
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
Thursday, July 17, 2025
ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕು ವ್ಯಾಪ್ತಿಯ ಕೌಕ್ರಾಡಿ ಎಂಬಲ್ಲಿ ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಬೆಳಗ್ಗಿನಿಂದಲೇ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು, ಮತ್ತಷ್ಟು ಮಣ್ಣು ಕುಸಿತ ಆಗಿರುವುದರಿಂದ ರಸ್ತೆ ಸಂಚಾರ ಸ್ಥಗಿತಗೊಳಿಸಿದ ಪೊಲೀಸರು ವಾಹನಗಳಿಗೆ ಪರ್ಯಾಯ ರಸ್ತೆ ಬಳಸಲು ಸೂಚಿಸಿದ್ದಾರೆ.