ಮರಳು ಖರೀದಿ, ಸಾಗಾಟಕ್ಕೆ ಆಪ್‌ಗೆ ಚಾಲನೆ

ಮರಳು ಖರೀದಿ, ಸಾಗಾಟಕ್ಕೆ ಆಪ್‌ಗೆ ಚಾಲನೆ

ಮಂಗಳೂರು: ದ. ಕ. ಜಿಲ್ಲೆಯಲ್ಲಿ ನಾನ್-ಸಿಆರ್ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆಪ್ ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAAR APP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್ಲೈನ್ (DK SAND BAZAAR APP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್ಗಳಲ್ಲಿ ೩,೩೦,೪೦೫ ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ. ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 83,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್ಸೈಟ್ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. 

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಛೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article