ಪೋಕ್ಸೋ ಪ್ರಕರಣ ತಡೆಗಟ್ಟಲು ಅಗತ್ಯ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಪೋಕ್ಸೋ ಪ್ರಕರಣ ತಡೆಗಟ್ಟಲು ಅಗತ್ಯ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪೊ?ಕ್ಸೋ ಪ್ರಕರಣ ತಡೆಗಟ್ಟಲು  ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು  ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟಲು ಶಾಲೆಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಅವರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು. ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಗತ್ಯ  ಕ್ರಮ ವಹಿಸಬೇಕು   ಇಂದು ಸೂಚಿಸಿದರು.

ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮತ್ತು ಲೈಂಗಿಕ  ದೌರ್ಜನ್ಯಕ್ಕೊಳಗಾದ  ಸಂತ್ರಸ್ತರಿಗೆ ಆಪ್ತ ಸಮಾಲೋಚನೆ ಸರಿಯಾಗಿ ನಡೆಸಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿವರವನ್ನು ಪರಿಶೀಲಿಸಿ, ದಾಖಲಾದ ಪ್ರಕರಣಗಳಲ್ಲಿ ಇತ್ಯರ್ಥವಾಗದೆ ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಲು ಅವರು ಸೂಚಿಸಿದರು.

ಗ್ರಾಮ ಪಂಚಾಯತ್ಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ನಡೆಸಬೇಕು. ಮಹಿಳೆಯರ ಮತ್ತು ಮಕ್ಕಳ ಕಾಣೆಯಾದ ಪ್ರಕರಣ, ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಚರ್ಚಿಸಿ ನಡವಳಿಯನ್ನು ತಾಲೂಕು ಸಮಿತಿಗೆ ಸಲ್ಲಿಸುವಂತೆ ಅವರು ಸೂಚಿಸಿದರು. ದೌರ್ಜನ್ಯಕ್ಕೊಳಗಾದ  ಮಹಿಳೆಯರಿಗೆ   ನಿರ್ಮಿಸಲಾದ ವಸತಿ ನಿಲಯಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಂಗಳಿಗೆ ಒಮ್ಮೆ ವಸತಿ ನಿಲಯಕ್ಕೆ ಭೇಟಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಒಟ್ಟು 115 ಪ್ರಕರಣಗಳು ದಾಖಲಾಗಿದ್ದು,  ಸಮಾಲೋಚನೆ ಹಂತದಲ್ಲಿರುವ 77 ಪ್ರಕರಣಗಳು ಇತ್ಯರ್ಥಗೊಂಡಿದೆ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಂರಕ್ಷಣಾಧಿಕಾರಿಗಳು ಅನುಸರಣೆ ನಡೆಸುತ್ತಿದ್ದಾರೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್ ಎ ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ರಾಜೇಶ್,  ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article