ಪುತ್ತೂರು ಮಗು ಭಾಗ್ಯ ಪ್ರಕರಣ: ಭೂಗತ ಪಾತಾಕಿ ಪ್ರವೇಶ

ಪುತ್ತೂರು ಮಗು ಭಾಗ್ಯ ಪ್ರಕರಣ: ಭೂಗತ ಪಾತಾಕಿ ಪ್ರವೇಶ

ಮಂಗಳೂರು: ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರ ಯುವತಿಯನ್ನು ಪ್ರೀತಿಸಿ ಗರ್ಭಿಣಿ ಮಾಡಿದ್ದ ಪ್ರಕರಣದಲ್ಲಿ  ಭೂಗತ ಪಾತಕಿಯ ಪ್ರವೇಶವಾಗಿದೆ.

ದೃಶ್ಯ ಮಾಧ್ಯಮದ ವರದಿಗಾರರೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಕರೆ ಮಾಡಿ  ಆರೋಪಿ ಕೃಷ್ಣ ಜೆ.ರಾವ್ ಜೈಲಿನಿಂದ ಹೊರ ಬಂದ ಮೇಲೆ ಯುವತಿಯನ್ನು ಮದುವೆ ಆಗಿಲ್ಲ ಎಂದಾದರೆ ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ ನೀಡಿದಲ್ಲದೆ ಹಿಂದೂ ಸಂಘಟನೆ ಮತ್ತು ಬಿಜೆಪಿ ನಾಯಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಬಿಜೆಪಿ ಮುಖಂಡನ ಪುತ್ರನ ಪ್ರಕರಣದ ಬಗ್ಗೆ ನಮಗೂ ದೂರು ಬಂದಿದೆ. ಓರ್ವ ಯುವತಿಯನ್ನು ಗಭಿ೯ಣಿ ಮಾಡಿ ಮೋಸ ಮಾಡಿದ್ದು, ಈಗ ಜೈಲಿನಲ್ಲಿ ಇರಬೇಕು. ಅನ್ಯಾಯವಾಗಿದೆ ಎಂದು ದೂರು ಬಂದಿದೆ. ಸಂತ್ರಸ್ತೆ ಮನೆಯವರ ಪರ ರಾಜಕೀಯದವರು ಯಾರೂ ನಿಲ್ಲುತ್ತಿಲ್ಲ. ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿ ಹಿಂದೂ ಅಲ್ಲವೇ? ಅವರ ಬಳಿ ಹಣವಿಲ್ಲ ಅಂತ ಬಿಟ್ಟುಬಿಡುವುದಾ ಎಂದು ಪ್ರಶ್ನೆ ಮಾಡಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article