
ಅಪರಾಧ ಕೃತ್ಯ: ಪೊಲೀಸ್ ವರಿಷ್ಠಾಧಿಕಾರಿಗೆ ಲಿಖಿತ ದೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬರು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಆ ವ್ಯಕ್ತಿಯ ಪರವಾಗಿ ವಕೀಲರಾದ ಓಜಸ್ವಿ ಗೌಡ, ಸಚಿನ್ ದೇಶಪಾಂಡೆಯವರು ಗುರುವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.
ದೂರನ್ನು ಸ್ವೀಕರಿಸಲಾಗಿದ್ದು, ವಿಚಾರಣೆ ನಡೆಸಿ, ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ..
ನನಗೆ ನಿರಂತರ ಪ್ರಾಣ ಬೆದರಿಕೆಯೊಡ್ಡಿ, ಈ ಗ್ರಾಮದ ವ್ಯಾಪ್ತಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊಲೆಗೊಳಗಾದ ಹಾಗೂ ಅತ್ಯಾಚಾರಕ್ಕೊಳಗಾಗಿ ಕೊಲೆಗೊಳಗಾದ ಅನೇಕ ಮೃತ ದೇಹಗಳು ಮತ್ತು ಸಾಕ್ಷ್ಯಗಳನ್ನು ನನ್ನಿಂದ ಬಲವಂತವಾಗಿ ಹೂತುಹಾಕಿಸಿದ್ದಾರೆ. ನನ್ನಿಂದ ಹೂತು ಹಾಕಿಸಿರುವ ಮೃತ ದೇಹಗಳ ಕಳೇಬರಗಳನ್ನು ಪೊಲೀಸರ ಸಮ್ಮುಖದಲ್ಲಿ ಹೊರತೆಗೆಸುವಂತೆ ಮನವಿ ಮಾಡುತ್ತಿದ್ದೇನೆ. ತಕ್ಷಣದ ಪ್ರಥಮ ವರ್ತಮಾನ ವರದಿ ಹಾಗೂ ಸಾಕ್ಷಿ ಸಂರಕ್ಷಣೆಯ ವಿನಂತಿ ಮಾಡುತ್ತಿದ್ದೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.