
ಆಳ್ವಾಸ್ ಪಿಯು ಕಾಲೇಜಿನ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಸಭೆ
Sunday, July 13, 2025
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇದು ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ದಿಕ್ಕನ್ನು ತೀರ್ಮಾನಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರವು ಬಹಳ ಮಹತ್ವದ್ದಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು.
ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2025ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಸಂಯೋಜಕಿ ವಿದ್ಯಾ ಇದ್ದರು.
ಇಂಗ್ಲಿಷ್ ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.