
ನಾಳೆ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಹಕ್ಕೊತ್ತಾಯ ಸಭೆ
Monday, July 14, 2025
ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಕ ಸಮಿತ್‌ರಾಜ್ ಅವರ ಮೊಬೈಲ್‌ನಲ್ಲಿ ಕಂಡು ಬಂದ ಅಶ್ಲೀಲ ವಿಡಿಯೊ ಪ್ರಕರಣವನ್ನು ಸರಕಾರ ಎಸ್‌ಐಟಿ ತನಿಖೆಗೆ ವಹಿಸಿಕೊಡಬೇಕೆಂದು ಆಗ್ರಹಿಸಿ ನಾಳೆ( ಜುಲೈ 15)ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ರಾಜೀವಗಾಂಧಿ ವಾಣಿಜ್ಯ ಸಂಕೀರ್ಣ ಎದುರು ಬೆಳಿಗ್ಗೆ 10 ಗಂಟೆಗೆ ಹಕ್ಕೊತ್ತಾಯ ಸಭೆ ನಡೆಯಲಿದೆ.
ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.