
ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆಗಳ ವಿತರಣೆ
Tuesday, July 15, 2025
ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡಬಿದಿರೆ ಇಲ್ಲಿ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಅಲಿಂಕೊ ಸಂಸ್ಥೆ ವತಿಯಿಂದ ಮೌಲ್ಯಾಂಕನ ನಡೆಸಿ ಆಯ್ದ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವು ಮಂಗಳವಾರ ನಡೆಯಿತು.
ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಿ, ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿ, ಸರಕಾರ ನೀಡುವ ಸೌಲಭ್ಯಗಳ ನೆರವನ್ನು ಪಡೆದು ಸರ್ವತೋಮುಖ ಬೆಳವಣಿಗೆಗೆ ಸಹಕರಿಸುವಂತೆ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ನವೀನ್ ಪುತ್ರನ್ ಹಾಗೂ ಶಿಕ್ಷಣ ಸಂಯೋಜಕ ರಾಜೇಶ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕಿ ಸುಶೀಲ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರು. ಫ್ಲೇವಿ ಡಿಸೋಜ ವಂದಿಸಿದರು.