ಕೆಂಪುಕಲ್ಲು, ಮರಳು ಸಿಗುವಂತೆ ಕರಾವಳಿಗೆ ಸೂಕ್ತ ನೀತಿ ಅಳವಡಿಕೆಗೆ ಸಿಡಬ್ಯುಎಫ್‌ಐ ಒತ್ತಾಯ

ಕೆಂಪುಕಲ್ಲು, ಮರಳು ಸಿಗುವಂತೆ ಕರಾವಳಿಗೆ ಸೂಕ್ತ ನೀತಿ ಅಳವಡಿಕೆಗೆ ಸಿಡಬ್ಯುಎಫ್‌ಐ ಒತ್ತಾಯ


ಮೂಡುಬಿದಿರೆ: ಇಲ್ಲಿನ ಆಡಳಿತ ಸೌಧದ ಮುಂಭಾಗ ಸೋಮವಾರ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್(ಸಿಡಬ್ಯುಎಫ್‌ಐ) ಮೂಡುಬಿದಿರೆ ತಾಲೂಕು ಸಮಿತಿಯು ನಡೆಸಿದ ಪ್ರತಿಭಟನೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಸಿಗುವಂತೆ ಕರಾವಳಿಗೆ ಸೂಕ್ತ ನೀತಿಯನ್ನು ಅಳವಡಿಸಬೇಕೆಂದು  ಒತ್ತಾಯಿಸಿದೆ.


ಸಿಡಬ್ಯುಎಫ್‌ಐ ಜಿಲ್ಲಾಧ್ಯಕ್ಷ ವಸಂತ ಆಚಾರಿ ಅವರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಕೆಂಪು ಕಲ್ಲು, ಮರಳು ಸಂಬಂಧಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜರುಗಿಸಿರುವುದರಿಂದ ಕೆಂಪು ಗಣಿಗಾರಿಕೆ ಮತ್ತು ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಂಡಿದೆ. ಇವುಗಳಿಗೆ ಸಂಬಂಧಪಟ್ಟ ಮಾಫಿಯ, ದಂಧೆಗಳನ್ನು ತಡೆಯುವ ಬರದಲ್ಲಿ ಬಡ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಜನಪ್ರತಿನಿಧಿಗಳು, ಅದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾಫಿಯಗಳಲ್ಲಿ ಶಾಮೀಲು ಆಗುವುದರಿಂದ ಇಲ್ಲಿಯವರೆಗೆ ಸೂಕ್ತ ನಿಯಮಗಳನ್ನು ರೂಪಿಸಲು ಸಾಧ್ಯವಾಗಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಂಡು ತುರ್ತುಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಸುಮಾರು 1.26 ಲಕ್ಷ ಜನ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, ಅವರ ಜೀವನೋಪಾಯಕ್ಕೆ ಸರ್ಕಾರ ಕನಿಷ್ಠ 10 ಸಾವಿರ ರೂ. ಪರಿಹಾರಧನವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ, ಸಿಡಬ್ಯುಎಫ್ ತಾಲೂಕು ಕಾರ್ಯದರ್ಶಿ ಶಂಕರ್ ವಾಲ್ಪಾಡಿ, ಮುಖಂಡರಾದ ಕೃಷ್ಣಪ್ಪ ನಡಿಗುಡ್ಡೆ, ದಿವಾಕರ ಸುವರ್ಣ, ವಾಸುದೇವ ಆಚಾರಿ, ಗಿರಿಜಾ, ಲಕ್ಷೀ ಮತ್ತಿತರರಿದ್ದರು. 

ಇದಕ್ಕೂ ಮೊದಲು ಹಳೇ ಪೊಲೀಸ್ ಠಾಣೆಯಿಂದ ಆಡಳಿತ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article