
ಆಳ್ವಾಸ್‌ನಲ್ಲಿ ಸ್ಪೆಕ್ಟಾಕಲ್ ವೇದಿಕೆ ಚಟುವಟಿಕೆ ಉದ್ಘಾಟನೆ
Thursday, July 3, 2025
ಮೂಡುಬಿದಿರೆ: ಲಾಜಿಸ್ಟಿಕ್ಸ್, ಶಿಪ್ಪಿಂಗ್ ವಲಯ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಮೂಲ. ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ. ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ ಕೊರತೆಯಿಂದ ಅನಿವಾರ್ಯವಾಗಿ ಗುಜರಾತ್ ಮತ್ತು ತಮಿಳುನಾಡಿನ ಸಿಬ್ಬಂದಿಯನ್ನು ನೇಮಿಸಬೇಕಾಯಿತು. ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ನವೀನ ಉದ್ಯಮಗಳಿಗೆ ಅನುಗುಣವಾಗಿ ರೂಪಿಸಿಕೊಳ್ಳಬೇಕು ಎಂದು ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ ಅಭಿಪ್ರಾಯಪಟ್ಟರು.
ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತç ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ಸ್ಪೆಕ್ಟಾಕಲ್ ವೇದಿಕೆಯ ಚಟುವಟಿಕೆಗಳ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಡಾ. ಕುರಿಯನ್ ಅಧ್ಯಕ್ಷತೆವಹಿಸಿದರು. ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ಸಹಾಯಕ ಪ್ರಾಧ್ಯಾಪಕಿ ಸೋನಿ, ಸುಹಾಸ್ ಶೆಟ್ಟಿ ವಿದ್ಯಾರ್ಥಿ ಸಂಯೋಜಕ ದೀಪಕ್, ಮಾನಸ, ವೈಶಾಖ್ ಇದ್ದರು.
ಕುಶಿ ಶೆಟ್ಟಿ, ಮೊಹಮ್ಮದ್ ಸೌದ್, ಸಾಕ್ಷಿ, ಸುಮಿತ್ ಕುಂದರ್, ಮಾನಸ ಹಾಗೂ ಮೋಕ್ಷಿತ್ ವೇದಿಕೆಯ ನೂತನ ವಿದ್ಯಾರ್ಥಿ ಸಂಯೋಜಕರಾಗಿ ನಿಯೋಜಿಸಲಾಯಿತು.
ಸಪ್ತಶ್ರೀ ನಿರೂಪಿಸಿ, ಇಶಿಕಾ ಅಂಚನ್ ಸ್ವಾಗತಿಸಿ, ಅಫ್ತಾಬ್ ರಹ್ಮಾನ್ ಅತಿಥಿಯನ್ನು ಪರಿಚಯಿಸಿ, ರಶ್ಮಿ ಶೆಟ್ಟಿ ವಂದಿಸಿದರು.