
ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರ
Monday, July 7, 2025
ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹುಟ್ಟುಹಬ್ಬದ ಪ್ರಯುಕ್ತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ (ರಿ) ಮೂಡುಬಿದಿರೆ ವಲಯ, ಪ್ರಸಾದ್ ನೇತ್ರಾಲಯ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಎಸ್ಸಿಲೋರ್ ಮಿಷನ್ ಪೌಂಡೇಷನ್ ಟ್ರಸ್ಟ್, ಡಾ. ಪಿ ದಯಾನಂದ ಪೈ ಮತ್ತು ಪಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಜಂಟಿ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಶಿಬಿರ ಸುನಂದ ಮಾಧವ ಸಭಾಭವನ ಕೆಸರ್ ಗದ್ದೆಯಲ್ಲಿ ನಡೆಯಿತು.
ಬೆಳುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸಂಘ ಸಂಸ್ಥೆಗಳು ಜನಪಯೋಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಯು. ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ ಪ್ರೇಮ್, ಗ್ರಾಮ ವಿಕಾಸ ಯೋಜನೆಯ ಸೇವಾ ದೀಕ್ಷಿತೆಯಾದ ಅನಿತಾ ಸ್ವಾಗತಿಸಿ, ಮೇಲ್ವಿಚಾರಕರಾದ ಸುಮಿತ್ರ ಕಾರ್ಯಕ್ರಮ ನಿರೂಪಿಸಿದರು. ರೋಹಿಣಿ ಆರ್. ವಂದಿಸಿದರು.
ನೂರಾರು ಮಂದಿ ಈ ಶಿಬಿರದಲ್ಲಿ ಭಾಗವಹಿಸಿದ್ದು, 75 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು. 25 ಮಂದಿಗೆ ಉಚಿತ ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದು, ಅದನ್ನೂ ಕೂಡ ಉಚಿತವಾಗಿ ಮಾಡಿಕೊಡಲಾಗುವುದು ಎಂದು ತಿಳಿಸಿದರು.