
ಎಕ್ಸಲೆಂಟ್ ಸಂಸ್ಥೆಯ ಟ್ರಸ್ಟಿ ರಾಜರತ್ನ ಕೆ. ನಿಧನ
Friday, July 25, 2025
ಮೂಡುಬಿದಿರೆ: ಧಾರ್ಮಿಕ ಮುಖಂಡ, ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮ ಕೊಡಂಗೆ ಮನೆ, ಹಿರಿಯ ಮುತ್ಸದಿ, ಕಲ್ಲಬೆಟ್ಟು ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಾಜರತ್ನ ಕೆ. (74) ಅವರು ಜುಲೈ 24 ರಂದು ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ರಾಜೇಂದ್ರ ಜೈನ್ ಮತ್ತು ಸೊಸೆ, ಪುತ್ರಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಅಳಿಯ ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಬಂಟ್ವಾಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಮ್ಯಾನೇಜರ್ ಆಗಿ ಸುಮಾರು 25 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿದ್ದರು. ಸಮಾಜದ ಎಲ್ಲ ವರ್ಗದ ಜನರ ಧಾರ್ಮಿಕ, ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಪ್ರೀತಿಪಾತ್ರರಾಗಿ ಜನಾನುರಾಗಿಯಾಗಿದ್ದರು. ಬಾಳ್ತಿಲ ಗ್ರಾಮದ ಆದರ್ಶ ಪ್ರಗತಿಪರ ಕೃಷಿಕರಾಗಿ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿಯೂ ಹಲವಾರು ಜನಪರ ಕಾಳಜಿಯಿಂದ ಸೇವೆ ಸಲ್ಲಿಸಿದರು. ಜೈನ್ ಮಿಲನ್, ಪಂಚಕಲ್ಯಾಣದಂತಹ ಕಾರ್ಯಕ್ರಮಗಳಲ್ಲಿ ಪ್ರೇರಕರಾಗಿ ಕಾರ್ಯನಿರ್ವಹಿಸಿದ್ದರು.