
ದ.ಕ ಜಿಲ್ಲಾ ಪಿಯು ಗಣಿತ ಉಪನ್ಯಾಸಕರ ಕಾರ್ಯಾಗಾರ
ಮೂಡುಬಿದಿರೆ: ದ.ಕ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸುತ್ತಾರೆ. ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಇಂತಹ ರಾಷ್ಟçಮಟ್ಟದ ಪರೀಕ್ಷೆಗಳಲ್ಲಿ ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.
ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಘವೇಂದ್ರ ಹಾಗೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ.ಪ್ರಶಾಂತ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ `ದಿ ಬುಕ್ ಮ್ಯಾಥ್ ಮೇಡ್ ಈಸಿ' ಪುಸ್ತಕದ 8ನೇ ಆವೃತ್ತಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಗಣಿತ ಶಿಕ್ಷಕಿ ಸೀತಾ ಹಾಗೂ ಪುಸ್ತಕದ ಸಂಪಾದಕೀಯ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು. ಮುಂಬರುವ ಶೈಕ್ಷಣಿಕ ವರ್ಷದ ಸಂಘದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು.
ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ಗಣಿತ ಉಪನ್ಯಾಸಕರ ಸಂಘದ ಅಧ್ಯಕ್ಷ ಲಾರೆನ್ಸ್ ಸಿಕ್ವೆರಿಯಾ, ಉಪಾಧ್ಯಕ್ಷ ಆದರ್ಶ್ ಚೊಕ್ಕಾಡಿ, ಕಾರ್ಯದರ್ಶಿ ಅನುಪಮಾ ಇದ್ದರು.
ವರುಣ್ ಪ್ರಭು, ವೆಲಿಟ, ಲೋಹಿತ್ ಸಾಲ್ಯಾನ್ ಹಾಗೂ ಸುಕನ್ಯಾ ನಿರೂಪಿಸಿದರು.ರವೀಂದ್ರನಾಥ್ ಬರ್ವೆ ವಂದಿಸಿದರು.