
ವಿದ್ಯಾರ್ಥಿಗಳು ಹಿರಿಯರಿಗೆ ಗೌರವ ಕೊಡುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ: ಶಾಸಕ ಉಮಾನಾಥ ಕೋಟ್ಯಾನ್
ಮೂಡುಬಿದಿರೆ: ತಮ್ಮ ವಿದ್ಯಾರ್ಥಿ ಜೀವನದಲ್ಲೇ ಕಲಿಕೆಯ ಜೊತೆಗೆ ಶಿಸ್ತು, ಸಂಯಮ, ಹಿರಿಯರಿಗೆ ಗೌರವ ನೀಡುವ ವ್ಯಕ್ತಿತ್ವವನ್ನು ವಿದ್ಯಾಥಿ೯ಗಳು ಮೈಗೂಡಿಸಿಕೊಂಡರೆ ಜೀವನದ ಯಶಸ್ಸಿಗೆ ಕಾರಣವಾಗುತ್ತದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಅಳಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ನಡೆದ ಶೂ, ಸಾಕ್ಸ್, ಸಮವಸ್ತ್ರ ವಿತರಣೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮತ್ತಷ್ಟು ಹೆಚ್ಚು ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಶ್ರಮವಹಿಸಬೇಕು, ಅಧ್ಯಾಪಕ ವೃಂದ ಕೂಡಾ ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಪಡಬೇಕು, ಶಿಕ್ಷಣಾಧಿಕಾರಿಯವರು ಕೂಡಾ ಎರಡು ತಿಂಗಳಿಗೊಮ್ಮ ಶಾಲೆಗೆ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು ಎಂದರು.
ಸನ್ಮಾನ: ಕಳೆದ ಎಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅವರು ಸನ್ಮಾನಿಸಲಾಯಿತು.
ಶಾಲೆಯ ಹಳೆವಿದ್ಯಾರ್ಥಿ, ಹೈಕೋರ್ಟ್ ನ್ಯಾಯವಾದಿಯಾಗಿರುವ ಚಂದ್ರವರ್ಮ ಜೈನ್, ಹೇಮಾ ಸಭಾಭವನದ ಮಾಲಕಿ ಹೇಮಾ ಕೆ.ಕೆ. ಪೂಜಾರಿ ಹಾಗೂ ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಆಯ್ಕೆಯಾಗಿರುವ ಇದೇ ಹೈಸ್ಕೂಲ್‌ನ ಶಾರೀರಿಕ ಶಿಕ್ಷಕ ಭಾಸ್ಕರ್ ಅವರನ್ನು ಸನ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರದೀಪ್ ಕುಮಾರ್, ವಾಲ್ಪಾಡಿ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ, ತಾ.ಪಂ. ಮಾಜಿ ಸದಸ್ಯ ರುಕ್ಕಯ್ಯ ಪೂಜಾರಿ, ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ಉದ್ಯಮಿ ಮಹಾವೀರ್ ಜೈನ್ ಅಳಿಯೂರು, ಅಶ್ವಥ್ ಪಣಪಿಲ, ಸುಕೇಶ್ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು, ಹರೀಶ್, ಪ್ರಮೀಳ, ಆಶಾಲತಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಚಿನ್ಮಯಾನಂದ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಅಧ್ಯಾಪಕ ಸುಬ್ರಹ್ಮಣ್ಯ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಮಹಾದೇವ ಮೂಡುಕೊಣಾಜೆ, ರಂಜನಾ, ಆನಿ ಡಿಂಪಲ್ ಕ್ಯಾಸ್ತಲಿನೋ, ರೇಖಾ, ಮಂಜುಳಾ, ರಂಜನಾ, ಮಣಿತಾ ಮತ್ತಿತರರು ವಿದ್ಯಾರ್ಥಿಗಳು ಮತ್ತು ಸನ್ಮಾನಿತರನ್ನು ಪರಿಚಯಿಸಿದರು. ವಿದ್ಯಾ ಅವರು ಕಾರ್ಯಕ್ರಮ ನಿರೂಪಿಸಿದರು.