
ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ
Saturday, July 12, 2025
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕಿನ ಆಲಂಗಾರು ವಲಯದ ಪಡುಕೋಣಾಜೆ ಕಾರ್ಯಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒದಗಿಸಿಕೊಟ್ಟ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರವನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕವೃಂದ ದವರಿಗೆ ತಾಲೂಕಿನ ಯೋಜನಾಧಿಕಾರಿ ಬಿ. ಧನಂಜಯ, ವಲಯ ಮೇಲ್ವಿಚಾರಕ ಚಂದ್ರಹಾಸ್, ಸ್ಥಳೀಯ ಸೇವಾಪ್ರತಿನಿಧಿ ಶಶಿರೇಖಾ, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳ ಸಮ್ಮುಖದಲ್ಲಿ ವಿತರಣೆ ಮಾಡಲಾಯಿತು.