ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ

ಆಳ್ವಾಸ್‌ನಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ


ಮೂಡುಬಿದಿರೆ: ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಶಿಕ್ಷಕರು.  ಮೌಲ್ಯಾಧಾರಿತ, ಚಾರಿತ್ರ್ಯವಂತ ವ್ಯಕ್ತಿತ್ವಗಳನ್ನು ರೂಪಿಸುವ ಸಂಕಲ್ಪ ಶಿಕ್ಷಕರಲ್ಲಿರಬೇಕು. ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಕರು ಅಂಧಕಾರವನ್ನು ದೂರಮಾಡಿ ಸಮಾಜವನ್ನು ಪ್ರಕಾಶಮಾನಗೊಳಿಸುವಲ್ಲಿ  ಮಹತ್ತರವಾದ ಪಾತ್ರವನ್ನು ನಿವ೯ಹಿಸುತ್ತಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. 

ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಕಾಯ೯ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದರು. 

ಸಂಸದ ಕ್ಯಾ.ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಮಾತನಾಡಿ, ಯುವಜನತೆಯನ್ನು ರಾಷ್ಟç ನಿರ್ಮಾಣದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪ್ರಧಾನಿಯವರ ವಿಕಸಿತ ಭಾರತದ ಕನಸಿಗೆ ಇದು ಪ್ರೇರಣೆಯಾಗಿದೆ ಎಂದರು. 

ಪ್ರಕಾಶ್ ಪಿ.ಎಸ್ ದಿಕ್ಸೂಚಿ ಭಾಷಣ ಮಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿದ್ದರು.

ಮಂಗಳೂರು ವಿವಿ ಉಪಕುಲಪತಿ ಪ್ರೊ.ಪಿ.ಎಲ್ ಧರ್ಮ, ವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕೆ.ಸಿ ಮಹಾದೇಶ, ಡಾ.ಎಸ್.ಬಿ.ಎಂ ಪ್ರಸನ್ನ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕೆಆರ್‌ಎಂಎಸ್‌ಎಸ್ ರಾಜ್ಯಾಧ್ಯಕ್ಷ ಡಾ. ಗುರುನಾಥ ಬಡಿಗೇರ್, ರಾಜ್ಯ ಕಾರ್ಯದರ್ಶಿ ಡಾ. ಮಾಧವ ಎಂ.ಕೆ, ಮಂಗಳೂರು ವಿಭಾಗದ ಅಧ್ಯಕ್ಷೆ ವಾಣಿ ಯು.ಎಸ್., ಉಡುಪಿ ವಿಭಾಗದ ಅಧ್ಯಕ್ಷ ಡಾ.ಸುರೇಂದ್ರ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಕುಮಾರ್, ಕಾರ್ಯಕ್ರಮದ ಸಂಯೋಜಕಿ ಜಯಲಕ್ಷೀ ಆರ್.ಶೆಟ್ಟಿ ಮತ್ತಿತರಿದ್ದರು. 

ಸಂಘಟನಾ ಕಾರ್ಯದರ್ಶಿ ವೆಂಕಟೇಶ್ ನಾಯಕ್ ನಿರೂಪಿಸಿದರು. 

ಪ್ರಶಸ್ತಿ ಪ್ರದಾನ: ಜೀವಮಾನದ ಸಾಧನೆಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಉಪಕುಲಪತಿ ಡಾ.ಎಚ್.ಎಸ್ ಬಲ್ಲಾಳ್ ಹಾಗೂ ಮೇಘಾಲಯದ ಸರಸ್ವತಿ ಸಮೂಹ ವಿದ್ಯಾಸಂಸ್ಥೆಗಳ ಸ್ಥಾಪಕ ಡಾ.ಅನಂತಕೃಷ್ಣ ಭಟ್ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ ನೀಡಲಾಯಿತು. ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಮಂಗಳೂರು ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ.ಪ್ರೇಮಲತಾ (ಕಾಲೇಜು ಆಡಳಿತ ನಿರ್ವಹಣೆ ಪ್ರಶಸ್ತಿ), ಸ್ಕೂಲ್ ಆಫ್ ಎಕನಾಮಿಕ್ಸ್ ಮಣಿಪಾಲ್‌ನ ಪ್ರೊ. ಹರೀಶ್ ಜೋಶಿ, ಎ.ಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಶಾಂತರಾಮ ರೈ ಸಿ.(ಅತ್ಯುತ್ತಮ ಸಂಶೋಧಕ ಪ್ರಶಸ್ತಿ), ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಧ್ಯಾಪಕಿ ಡಾ.ಸುಭಾಷಿಣಿ ಶ್ರೀವತ್ಸ ಹಾಗೂ ಜಿ. ಶಂಕರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜೇಂದ್ರ(ಅತ್ಯುತ್ತಮ ಶಿಕ್ಷಕ ಪ್ರಶಸ್ತಿ), ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರೊ. ವಿಜಯಲತಾ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ.ಯಶೋದ(ಅತ್ಯುತ್ತಮ ಗ್ರಂಥಪಾಲಕ ಪ್ರಶಸ್ತಿ), ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಡಾ.ರಾಧಾಕೃಷ್ಣ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆಯ ಶಿಕ್ಷಕ ತಮ್ಮಯ್ಯ ಅವರಿಗೆ ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿ ನೀಡಿ ಗೌರವಿಸಲಾಯಿತು. 2025ನೇ ಸಾಲಿನಲ್ಲಿ ಪಿ.ಎಚ್‌ಡಿ ಪದವಿ ಪಡೆದ 13 ಮಂದಿ ಸಂಶೋಧನಾರ್ಥಿಗಳನ್ನು ಸನ್ಮಾನಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article