
ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಫಿಲೋ ಬ್ಲೋಸ್ಸಮ್-2025’ ಪ್ರತಿಭಾ ದಿನ ಕಾರ್ಯಕ್ರಮ
Friday, July 4, 2025
ಪುತ್ತೂರು: ಸಂತ ಫಿಲೋಮಿನಾ ಪ.ಪೂ. ಕಾಲೇಜು ಹಾಗೂ ಲಲಿತ ಕಲಾ ಸಂಘದ ಆಶ್ರಯದಲ್ಲಿ ಜು.4 ರಂದು ‘ಫಿಲೋ ಬ್ಲೋಸ್ಸಮ್-2025’ ಪ್ರತಿಭಾ ದಿನ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಜೀವನ ಕೌಶಲ್ಯವನ್ನು ರೂಢಿಸಿಕೊಳ್ಳಲು ‘ಫಿಲೋ ಬ್ಲೋಸ್ಸಮ್’ನಂತಹ ಪ್ರತಿಭಾ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ತೀರ್ಪುಗಾರರಾಗಿ ಸಹಕರಿಸಿದ ಪುತ್ತೂರಿನ ಸಂಗೀತ ಕಲಾವಿದರಾದ ಶಿವಾನಂದ ಶೆಣೈ, ಭರತನಾಟ್ಯ ಕಲಾವಿದರಾದ ಡಾ. ನಿಷಿತಾ ಪುತ್ತೂರು ಹಾಗೂ ಉಪನ್ಯಾಸಕರಾದ ಮನುಜ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸಮೂಹ ನೃತ್ಯ, ಜಾನಪದ ಗೀತೆ ಹಾಗೂ ವಾದ್ಯ ಸಂಗೀತ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಶರತ್ ಆಳ್ವ ವಂದಿಸಿ, ಲವೀಶಾ ಡಿ’ಕುನ್ಹಾ ಹಾಗೂ ವಿನೋಲಾ ಅಮಿತಾ ಲೋಬೋ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.