
ಸಂತ ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಹದಿಹರೆಯದವರಲ್ಲಿ ಆರೋಗ್ಯ ಮತ್ತು ನೈರ್ಮಲ್ಯ’ ಕಾರ್ಯಗಾರ
Friday, July 11, 2025
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ‘ಹದಿಹರೆಯದವರಲ್ಲಿ ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಕಾರ್ಯಗಾರವು ಜು ೧೦ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಪುತ್ತೂರಿನ ಸಿಟಿ ಆಸ್ಪತ್ರೆ ಹಾಗೂ ಉಷಾ ಪಾಲಿಕ್ಲಿನಿಕ್‌ನ ವೈದ್ಯೆ ಡಾ. ಸ್ವಾತಿ ಭಟ್ ಮಾತನಾಡಿ, ಆರೋಗ್ಯಕರ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಹದಿಹರೆಯದ ವಿದ್ಯಾರ್ಥಿನಿಯರ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ವಿವರಿಸಿ, ಈ ಸಮಯದಲ್ಲಿ ಉಂಟಾಗುವ ಆರೋಗ್ಯದ ಸಮಸ್ಯೆಗಳನ್ನು ತಪ್ಪಿಸಲು ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ, ಸಾಕಷ್ಟು ನಿದ್ದೆ, ಒತ್ತಡ ರಹಿತ ಜೀವನ ಅಗತ್ಯ ಎಂದರು.
ಸಮತೋಲನಯುಕ್ತ ಆಹಾರವು ದೇಹದ ಸಮಗ್ರ ಬೆಳವಣಿಗೆ ಮತ್ತು ಉತ್ತಮ ಆರೋಗ್ಯಕ್ಕೆ ಅವಶ್ಯಕ ಎಂದ ಅವರು ಜೊತೆಗೆ ಹದಿಹರೆಯದಲ್ಲಿ ಬರುವ ಹಲವು ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ಮತ್ತು ಶೈಕ್ಷಣಿಕ ಜೀವನವನ್ನು ಸುದಾರಿಕೊಳ್ಳಲು ಪ್ರಯತ್ನಿಸಬೇಕೆಂದು ಎಂದು ಹೇಳಿದರು.
ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರುಗಳಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಆಶಲ್ ಜೇನ್ ಡಿಕುನ್ಹ ಸ್ವಾಗತಿಸಿ, ಕೀರ್ತನಾ ವಂದಿಸಿ, ಕಿಶೋರಿ ಎಂ ಕಾರ್ಯಕ್ರಮ ನಿರೂಪಿಸಿದರು.