
ಪತಿಯಿಂದ ಪತ್ನಿಯ ಹತ್ಯೆ
Thursday, July 17, 2025
ಪುತ್ತೂರು: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್ಬ ಪತ್ನಿಯನ್ನು ಚೂರಿಯಿಂದ ಇರಿದು ಕೊಂಡ ಘಟನೆ ಗುರುವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಅಜಿಲಮೊಗರು ಸಮೀಪದ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ಈ ಘಟನೆ ನಡೆದಿದ್ದು, ಮೃತಪಟ್ಟ ಮಹಿಳೆಯನ್ನು ಝೀನತ್ (40) ಹಾಗೂ ಪತ್ನಿಯನ್ನು ಕೊಲೆಗೈದ ಆರೋಪಿಯನ್ನು ರಫೀಕ್(45) ಎಂದು ಗುರುತಿಸಲಾಗಿದೆ.
ಬೆಳಿಗ್ಗೆ ಗಂಡ-ಹೆಂಡತಿ ನಡುವೆ ಮಾತಿಗೆ ಮಾತು ಬೆಳೆದು ಆತ ಚೂರಿಯಿಂದ ಪತ್ನಿಯ ಮೇಲೆ ಇರಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ದುಬೈಯಲ್ಲಿದ್ದ ರಫೀಕ್ ಕೆಲ ತಿಂಗಳ ಹಿಂದೆ ಊರಿಗೆ ಬಂದಿದ್ದ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.