ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಪ್ರತಿಭಟನೆ: ಅವಿಭಜಿತ ಜಿಲ್ಲಾ ವಿಶ್ವಕರ್ಮ ಒಕ್ಕೂಟ ನಿರ್ಣಯ

ಸಂತ್ರಸ್ತೆಗೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಪ್ರತಿಭಟನೆ: ಅವಿಭಜಿತ ಜಿಲ್ಲಾ ವಿಶ್ವಕರ್ಮ ಒಕ್ಕೂಟ ನಿರ್ಣಯ


ಪುತ್ತೂರು: ಮದುವೆಯಾಗುವ ಭರವಸೆ ನೀಡಿ ಯುವತಿಯನ್ನು ಗರ್ಭವತಿ ಮಾಡಿದ ಯುವಕ ಇದೀಗ ಆಕೆಯನ್ನು ವಂಚಿಸುತ್ತಿದ್ದು, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು. 2 ದಿನಗಳಲ್ಲಿ ಈ ಬಗ್ಗೆ ಗುಣಾತ್ಮಕ ಬೆಳವಣಿಗೆಯಾಗದಿದ್ದಲ್ಲಿ ವಿಶ್ವಕರ್ಮ ಸಮುದಾಯ ಯುವಕನ ಮನೆ ಮುಂದೆ ಉಗ್ರ ಪ್ರತಿಭಟನೆಗೆ ಮುಂದಾಗುವ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ.

ಅವಿಭಜಿತ ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟ ಬುಧವಾರದಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ತುರ್ತು ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದೆ. 

ಶಾಸಕರೇ ಮುಂದೆ ನಿಂತು ಮದುವೆ ಮಾಡಿ:

ಈ ಸಂದರ್ಭ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮಾತನಾಡಿ, ಸಂತ್ರಸ್ತೆ ಠಾಣೆಗೆ ದೂರು ಕೊಡಲು ಹೋಗಿದ್ದು, ಶಾಸಕರ ಮನವಿಯಂತೆ ಮದುವೆಯಾಗುವುದಾಗಿ ಆರೋಪಿ ಮುಚ್ಚಳಿಕೆ ಬರೆದುಕೊಟ್ಟಿದ್ದಾನೆ. ಈಗ ಮೋಸ ಮಾಡುತ್ತಿದ್ದಾನೆ. ಹಾಗಾಗಿ ಶಾಸಕರೇ ಮುಂದೆ ನಿಂತು ಮದುವೆ ಮಾಡಿಕೊಡಬೇಕು. ವಿಶ್ವಕರ್ಮ ಸಮುದಾಯದ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಅವಳ ತಾಯಿ ನಮ್ಮಲ್ಲಿಗೆ ಬರಲಿಲ್ಲ ಎಂಬ ವಿಚಾರವನ್ನು ಪಕ್ಕಕ್ಕಿಟ್ಟು ಸಂತ್ರಸ್ಥೆಗೆ ನ್ಯಾಯಕೊಡಿಸುವಲ್ಲಿ ನಾವೆಲ್ಲಾ ಮುಂದಾಗಬೇಕು. ಈ ಬಗ್ಗೆ ಎಸ್ಪಿ ಅವರಿಗೆ ಮನವಿ ನೀಡುವುದು. ಕ್ರಮ ಕೈಗೊಳ್ಳದಿದ್ದರೆ ಪೊಲೀಸ್ ಠಾಣೆಯ ಮುಂದೆಯೂ ಪ್ರತಿಭಟನೆ ನಡೆಸುವುದು ಎಂದು ಅವರು ಹೇಳಿದರು.

ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ವಾಸ್ತುತಜ್ಞನೂ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ಆದರೆ ನಾವೆಲ್ಲ ಒಗ್ಗಟ್ಟಿನಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಮಗೆ ರಾಜಕೀಯದಲ್ಲಿ ಯಾರೂ ಸೀಟು ಕೊಡುವುದಿಲ್ಲ. ನಮಗೆ ಯಾರನ್ನು ಗೆಲ್ಲಿಸಲಾಗದಿದ್ದರೂ ಸೋಲಿಸಲಂತೂ ಖಂಡಿತಾ ಆಗುತ್ತದೆ ಎಂದು ಮಧು ಆಚಾರ್ಯ ಹೇಳಿದರು.

ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮುಂದೆ ಸಂತ್ರಸ್ತೆಯನ್ನು ಭೇಟಿ ಮಾಡಿ ಅಲ್ಲಿಂದ ಮಹಿಳಾ ಪೊಲೀಸ್ ಠಾಣೆ ಹಾಗೂ ಎಸ್ಪಿಯವರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

ಅವಿಭಜಿತ ದ.ಕ. ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುರಳೀಧರ ಆಚಾರ್ಯ, ಉಪಾಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ, ಪ್ರಮುಖರಾದ ಹರ್ಷವರ್ದನ್ ನಿಟ್ಟೆ, ಜಯರಾಮ ಆಚಾರ್ಯ ಸಾಲಿಗ್ರಾಮ, ಜಯರಾಮ ಆಚಾರ್ಯ ಕುಲಾಯಿ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಭಾಸ್ಕರ್ ಆಚಾರ್ಯ ಕಾಣಿಯೂರು, ವಿಶ್ವಕರ್ಮ ಬೀರಮಲೆ ಅಧ್ಯಕ್ಷ ಗಂಗಾಧರ ಆಚಾರ್ಯ, ಕೋಶಾಧಿಕಾರಿ ನಿರಂಜನ ಆಚಾರ್ಯ, ಪುತ್ತೂರು ವಿಶ್ವಕರ್ಮ ಸಮಾಜ ಸಭಾದ ಸುರೇಂದ್ರ ಆಚಾರ್ಯ, ಯುವಮಿಲನ ಅಧ್ಯಕ್ಷ ಹರೀಶ್ ಆಚಾರ್ಯ, ಅನೆಗುಂದಿ ಗುರುದೇವ ಪರಿಷತ್ ಪುತ್ತೂರು ಸಮಿತಿ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ, ಉಮೇಶ್ ಆಚಾರ್ಯ, ಮಹಿಳಾ ಸಂಘದ ಅಧ್ಯಕ್ಷೆ ಇಂದಿರ ಪುರುಷೋತ್ತಮ ಆಚಾರ್ಯ, ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ, ಪುರಸಭೆ ಮಾಜಿ ಸದಸ್ಯ ಉದಯ ಆಚಾರ್ಯ ಸಹಿತ ಹಲವು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article