
ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ: ಇಬ್ಬರ ಬಂಧನ
Wednesday, July 2, 2025
ಪುತ್ತೂರು: ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸಾಮೆತ್ತಡ್ಕ ನಿವಾಸಿ ವಿಲ್ಫ್ರೆಡ್ ಎಂಬಾತನು ತನ್ನ ಮನೆಯ ಸಮೀಪದ ಕಟ್ಟಡವೊಂದರಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಜು.15 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.