ಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚನೆ-ಪಾರದರ್ಶಕ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ: ಅಶೋಕ್ ರೈ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ರಚನೆ-ಪಾರದರ್ಶಕ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ: ಅಶೋಕ್ ರೈ


ಪುತ್ತೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿ ಇದು ಸರ್ಕಾರದ ದಿಟ್ಟ ಹಾಗೂ ಜನಪರ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರಗೆಳೆಯಲು ಎಸ್‌ಐಟಿ ರಚಿಸಬೇಕೆಂಬ ಜನರ ಆಗ್ರಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಂದಿಸಿದ್ದಾರೆ. ಅವರ ಈ ನಿರ್ಧಾರ ಅತ್ಯಂತ ಸಮಯೋಚಿತ ಎಂದು ತಿಳಿಸಿದ್ದಾರೆ.

ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ವರು ಖಡಕ್ ಹಾಗೂ ದಕ್ಷ ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಿರುವುದು ತನಿಖೆಯ ಮೇಲೆ ನಂಬಿಕೆ ಹೆಚ್ಚಿಸಿದೆ. ಅಜ್ಞಾತ ವ್ಯಕ್ತಿಯೊಬ್ಬರು ನೀಡಿದ ದೂರಿನಲ್ಲಿನ ವಿಷಯಗಳನ್ನು ಈ ತಂಡವು ಯಾವುದೇ ಮುಲಾಜಿಗೆ ಒಳಗಾಗದೆ, ಪ್ರಾಮಾಣಿಕವಾಗಿ ಹಾಗೂ ನ್ಯಾಯನಿಷ್ಠುರತೆಯಿಂದ ತನಿಖೆ ನಡೆಸಬೇಕು. ಅತಿ ಶೀಘ್ರದಲ್ಲಿ ಸತ್ಯವನ್ನು ಬಯಲಿಗೆಳೆದು, ಜನರ ಮನಸ್ಸಿನಲ್ಲಿ ಮೂಡಿರುವ ಗೊಂದಲಗಳನ್ನು ಪರಿಹರಿಸಬೇಕು ಎಂದು ಅಶೋಕ್ ರೈ ಆಗ್ರಹಿಸಿದರು.

ಒಂದು ವೇಳೆ ದೂರಿನಲ್ಲಿ ಉಲ್ಲೇಖಿಸಿರುವಂತೆ ಅಲ್ಲಿ ನೂರಾರು ಶವಗಳು ಪತ್ತೆಯಾದರೆ, ಆ ಎಲ್ಲ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಎಸ್‌ಐಟಿ ತನಿಖೆಯು ಪಾರದರ್ಶಕವಾಗಿ ನಡೆದು, ಪ್ರಕರಣಕ್ಕೆ ಅಂತಿಮ ತೆರೆ ಎಳೆಯಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿಶ್ವ ಹಿಂದೂ ಷರಿಷದ್ ಸ್ವಾಗತ:

ಧರ್ಮಸ್ಢಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವ ಆರೋಪದ ತನಿಖೆಗಾಗಿ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದು, ಆ ನಿರ್ಧಾರವನ್ನು ವಿಶ್ಟ ಹಿಂದೂ ಪರಿಷದ್ ಸ್ಟಾಗತಿಸಿದೆ. ತನಿಖೆಯು ನಿಷ್ಪಕ್ಷಪಾತವಾಗಿ ನಡೆಯಲಿ ಹಾಗೂ ವಿಷಯದ ಸತ್ಯಾಸತ್ಯತೆ ಸಮಾಜಕ್ಕೆ ತಿಳಿಯಲಿ ಎಂದು ವಿಶ್ವ ಹಿಂದೂ ಪರಿಷದ್ ಆಶಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article