
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ
Wednesday, July 9, 2025
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ದಂಪತಿ ಅವರು ಬುಧವಾರ ಭೇಟಿ ನೀಡಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಹಾಗೂ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇವೆ ನೆರವೇರಿಸಿದರು. ದೇವಸ್ಥಾನದ ವತಿಯಿಂದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಗೃಹ ಸಚಿವರನ್ನು ಗೌರವಿಸಿದರು.
ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು, ಪ್ರಮುಖರಾದ ಜಿ.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿವಿಧ ಬೇಡಿಕೆಗಳ ಬಗ್ಗೆ ಸಚಿವರಿಗೆ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು.