ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ


ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ತಾಲೂಕಿನ ಶೌರ್ಯ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್ ಆಶಯ ಮಾತುಗಳನ್ನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.

ಎನ್‌ಡಿಆರ್‌ಎಫ್ ಟೀಂ ಕಮಾಂಡರ್ ಇನ್‌ಸ್ಪೆಕ್ಟರ್ ಶಾಂತಿಲಾಲ್ ಜಟಿಯಾ ನೇತೃತ್ವದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಗೆ ತರಬೇತಿ ನೀಡಲಾಯಿತು.

ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಶೌರ್ಯ ಯೋಜನೆಯ ಯೋಜನಾಧಿಕಾರಿ ಜೈವಂತ್ ಪಟಗಾರ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ, ವಿಪತ್ತು ನಿರ್ವಹಣಾ ತಾಲೂಕು ಸಮಿತಿಯ ಮಾಸ್ಟರ್ ಪಿ.ಜಿ.ಜಯರಾಮ, ಕ್ಯಾಪ್ಟನ್ ಸತೀಶ್ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಮಾಧವ ಗೌಡ ಸ್ವಾಗತಿಸಿ, ದಿನೇಶ್ ವಂದಿಸಿ ಮೇಲ್ವಿಚಾರಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ತರಬೇತಿ ಕಾರ್ಯಗಾರದಲ್ಲಿ ಸುಳ್ಯ ತಾಲೂಕಿನ ಶೌರ್ಯ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು. 

ಶೌರ್ಯ ವಿಪತ್ತು ನಿರ್ವಹಣಾ ಘಟಕ 5 ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ತರಬೇತಿ ನೀಡಿದ ಅಧಿಕಾರಿಗಳಾದ ಟೀಮ್ ಕಮಾಂಡರ್ ಶಾಂತಿಲಾಲ್ ಜಟಿಯ, ಜೈವಂತ್ ಪಟಗಾರ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣರನ್ನು ಸನ್ಮಾನಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article