
ನೇಜಾರು ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ ವಿಸ್ತರಣೆ
Sunday, July 20, 2025
ಉಡುಪಿ: ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಗೆ ಜು.31ರಂದು ದಿನಾಂಕ ನಿಗದಿಗೊಳಿಸುವುದಾಗಿ ನ್ಯಾಯಾಲಯ ತಿಳಿಸಿದೆ.
ಶನಿವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರ ಪೀಠದಲ್ಲಿ ನಡೆದ ಕಲಾಪದಲ್ಲಿ ಆರೋಪಿ ಪರ ವಕೀಲರಿಗೆ ದೋಷಾರೋಪಣೆ ಪಟ್ಟಿ ನೀಡಲಾಯಿತು.
ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಆತನಿಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಯಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ, ಆರೋಪಿ ಪರವಾಗಿ ಡಿಫೆನ್ಸ್ ಕೌನ್ಸಿಲ್ ಮುಖ್ಯಸ್ಥ ರಾಜು ಪೂಜಾರಿ ಹಾಜರಿದ್ದರು.