ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖಾ ತಂಡಕ್ಕೆ 20 ಅಧಿಕಾರಿಗಳ ಸೇರ್ಪಡೆ

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖಾ ತಂಡಕ್ಕೆ 20 ಅಧಿಕಾರಿಗಳ ಸೇರ್ಪಡೆ

ಉಜಿರೆ: ಧರ್ಮಸ್ಥಳ ಪ್ರಕರಣದಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡದಲ್ಲಿ ಹೊಸದಾಗಿ 20 ಅಧಿಕಾರಿಗಳನ್ನು ಸೇರಿಸಿ ತನಿಖಾ ತಂಡವನ್ನು  ವಿಸ್ತರಿಸಲಾಗಿದ್ದು, ಶೀಘ್ರ ತನಿಖಾ ತಂಡ ಧರ್ಮಸ್ಥಳಕ್ಕೆ ಆಗಮಿಸಿ, ಪ್ರಕ್ರಿಯೆ ಪ್ರಾರಂಭಿಸುವ ನಿರೀಕ್ಷೆಯಿದೆ.

ಧರ್ಮಸ್ಥಳದಲ್ಲಿ ಅನೇಕ ಹೆಣಗಳನ್ನು ಹೂತಿರುವುದಾಗಿ ಸ್ವಚ್ಛತಾ ಕಾರ್ಮಿಕನೊಬ್ಬ ನೀಡಿದ ಹೇಳಿಕೆಯನ್ವಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದ.

ಪ್ರಕರಣದ ವಿಶೇಷ ತನಿಖೆ ನಡೆಸುವಂತೆ ರಾಜ್ಯಾದ್ಯಂತ ಒತ್ತಾಯ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜು.19 ರಂದು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಕುಮಾರ್ ಮೊಹಾಂತಿ ನೇತೃತ್ವದಲ್ಲಿ ಎಂ.ಎನ್. ಅನುಚೇತ್, ಸೌಮ್ಯಲತಾ, ಜಿತೇಂದ್ರ ಕುಮಾರ್ ದಯಾಮ ಅವರನ್ನು ಒಳಗೊಂಡ ಎಸ್‌ಐಟಿ ತಂಡವನ್ನು ರಚಿಸಲಾಗಿತ್ತು. ಇದೀಗ ಎಸ್‌ಐಟಿ ತಂಡಕ್ಕೆ ಮತ್ತೆ 20 ಅಧಿಕಾರಿಗಳನ್ನು ನಿಯುಕ್ತಿಗೊಳಿಸಿ ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article