ಸೆ.14 ರಿಂದ 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಸೆ.14 ರಿಂದ 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಉಜಿರೆ: ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14 ರಿಂದ 21ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಶ್ರಯದಲ್ಲಿ 27ನೇ ವರ್ಷದ ಭಜನಾ ಕಮ್ಮಟವನ್ನು ಆಯೋಜಿಸಲಾಗಿದೆ ಎಂದು ಭಜನಾ ಕಮ್ಮಟದ ಸಂಚಾಲಕ ಟಿ. ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಆರಂಭಗೊಂಡು 21 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವಿದ್ದು, 18 ವರ್ಷ ಪ್ರಾಯದಿಂದ 45 ವರ್ಷ ಪ್ರಾಯದ ಒಳಗಿನವರಿಗೆ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅವಕಾಶವಿದೆ. ಇದುವರೆಗೆ ಇಲ್ಲಿನ ಭಜನಾ ಕಮ್ಮಟದಲ್ಲಿ ಭಾಗವಹಿಸದೆ ಇರುವವರಾಗಿರಬೇಕು. ಒಂದು ಭಜನಾ ಮಂಡಳಿಯಿಂದ ಇಬ್ಬರಿಗೆ ಮಾತ್ರ ಅವಕಾಶವಿದ್ದು, ತಾವು ಕಲಿತು ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು. ಆಸಕ್ತರು ಸಂಬಂಧಪಟ್ಟವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 9632064164, 9663464648, 8147263422, 08256-266644 ಆಗೋಸ್ಟ್ 31ರ ಒಳಗೆ ಹೆಸರು ನೋಂದಾಯಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article