
ಧರ್ಮಸ್ಥಳ ಅಪಪ್ರಚಾರ ಮುಕ್ತವಾಗಲೆಂದು ಮಹಿಳೆಯರಿಂದ ಉರುಳುಸೇವೆ
Friday, July 25, 2025
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಬೇಕು. ಅಪಪ್ರಚಾರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಪ್ರಾರ್ಥಿಸಿ ಜು.25 ರಂದು ಬೆಳಗ್ಗೆ ಬೆಂಗಳೂರು, ಮಂಡ್ಯ ಮುಂತಾದ ಕಡೆಗಳಿಂದ ಆಗಮಿಸಿದ ಕರವೇ ಮಹಿಳಾ ತಂಡದ ಸುಮಾರು 40 ಜನ ಹೆಣ್ಣು ಮಕ್ಕಳು ಉರುಳು ಸೇವೆ ಸಲ್ಲಿಸಿದರು.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಶ್ರೀ ಮಂಜುನಾಥ ಸ್ವಾಮಿ ಸದ್ಬುದ್ಧಿಯನ್ನು ಕೊಡಲಿ. ಸೌಜನ್ಯ ಅವಳ ಪ್ರಕರಣ ಶೀಘ್ರ ಇತ್ಯರ್ಥವಾಗಲಿ. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ಶೀಘ್ರ ದೂರವಾಗಲಿ ಎಂದು ಕರವೇ ಮಹಿಳಾ ಘಟಕದ ವತಿಯಿಂದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ ಉರುಳು ಸೇವೆ ಸಲ್ಲಿಸಿ ಶ್ರೀ ದೇವರ ದರ್ಶನ ಪಡೆದು ಪ್ರಾರ್ಥಿಸಿದರು.