
ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Saturday, July 12, 2025
ಉಜಿರೆ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಹೊನ್ನಾವರದ ಶ್ರೀಧರ ವೆಂಕಟಕೃಷ್ಣ ಉಪಾಧ್ಯಾಯ ಎಂಬಾತ ಬಂಧಿತ ಆರೋಪಿ.
ಈತನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಅ.ಕ್ರ. 510/2015 ಕಲಂ. 379 ಐಪಿಸಿ ಪ್ರಕರಣ ದಾಖಲಾಗಿತ್ತು. ಈತ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಆರೋಪಿಯನ್ನು ಜು.11 ರಂದು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಉಪ ನೀರಿಕ್ಷಕ ಸಮರ್ಥ್ ಅವರ ಮಾರ್ಗದರ್ಶನದಲ್ಲಿ ಠಾಣಾ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್ ಅವರು ಮಂಗಳೂರಿನಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿದಿಸಲಾಗಿದೆ.