
ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ
Friday, July 25, 2025
ಉಜಿರೆ: ‘ಕಾಳುಮೆಣಸಿನ ರಾಣಿ’ ಎಂದೇ ಚಿರಪರಿಚಿತರಾದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆಚೀಟಿಯನ್ನು ಶುಕ್ರವಾರ ದೆಹಲಿಯಲ್ಲಿ ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ದ್ರೌಪದಿಮುರ್ಮು ಬಿಡುಗಡೆಗೊಳಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು, ಜೈನಕಾಶಿ ಮೂಡಬಿದ್ರೆಯ ಎಕ್ಸೆಲ್ ಶಿಕ್ಷಣಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ನಾರಾವಿ ಮತ್ತು ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹೊನ್ನಾವರದಲ್ಲಿ ರಾಣಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ ನಿರ್ಮಿಸಲು ಯೋಜಿಸಿದ್ದು ಸರ್ಕಾರ ಇದಕ್ಕಾಗಿ ಸೂಕ್ತ ಜಾಗವನ್ನು ಮಂಜೂರು ಮಾಡಿದೆ. ಭರದಿಂದ ಸಿದ್ಧತೆಗಳು ನಡೆಯುತ್ತಿವೆ.