ಸತ್ಯ ತನಿಖೆಗೆ ಆಗ್ರಹ

ಸತ್ಯ ತನಿಖೆಗೆ ಆಗ್ರಹ

ಉಜಿರೆ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ‘ಹಲವಾರು ಶವಗಳನ್ನು ಹೂತಿದ್ದೆ’ ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ‘ಸತ್ಯ’ ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article